Advertisement

ಇನ್ನೆರಡು ವರ್ಷದಲ್ಲಿ ಜಿಲ್ಲೆ ಚಿತ್ರಣವೇ ಬದಲು

05:27 PM Dec 20, 2020 | Suhan S |

ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳಅಭಿವೃದ್ಧಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ. ರಾಫವೇಂದ್ರ ಹೇಳಿದರು.

Advertisement

ಶನಿವಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಲೋಕಾರ್ಪಣೆ ಸಮಾರಂಭದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಇದುವರೆಗೆ ಇದ್ದ 22 ರಾಷ್ಟ್ರೀಯ ಹೆದ್ದಾರಿಗಳ ಸಂಖ್ಯೆಯನ್ನು 44ಕ್ಕೆ ಹೆಚ್ಚಿಸಲಾಗಿದೆ.423ಕೋಟಿ ರೂ. ವೆಚ್ಚದಲ್ಲಿ ಕಳಸವಳ್ಳಿ-ಸಿಗಂದೂರುಸೇತುವೆ ನಿರ್ಮಾಣ ಕಾರ್ಯ ಭರದಿಂದನಡೆಯುತ್ತಿದ್ದು ಒಂದು ವರ್ಷದ ಒಳಗಾಗಿಪೂರ್ಣಗೊಳ್ಳಲಿದೆ. 516ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗ-ಶಿವಮೊಗ್ಗ ಚತುಷ್ಪಥ ರಸ್ತೆ ಅಭಿವೃದ್ಧಿಯಿಂದ ಬೆಂಗಳೂರು ಸಂಪರ್ಕ ಸುಲಭವಾಗಲಿದೆ ಎಂದರು.

ಶಿವಮೊಗ್ಗ ನಗರದ ಜನತೆಯ ಬಹು ವರ್ಷಗಳ ಬೇಡಿಕೆಯಾಗಿದ್ದ ವಿದ್ಯಾನಗರದ ಬಳಿ ವಿನೂತನವಾದ ವೃತ್ತಾಕಾರದ ರೈಲ್ವೇಮೇಲ್ಸೇತುವೆ ನಿರ್ಮಾಣ ಕಾರ್ಯ 44ಕೋಟಿ ರೂ.ವೆಚ್ಚದಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ನಿಟ್ಟೂರುಮತ್ತು ಹೊಸನಗರ ಭಾಗದಲ್ಲಿ ಶಿಥಿಲಗೊಂಡಿರುವ7 ಸೇತುವೆಗಳ ಪುನರ್‌ ನಿರ್ಮಾಣಕ್ಕಾಗಿ 19ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. 96ಕೋಟಿ ರೂ. ವೆಚ್ಚದಲ್ಲಿ ಸೊಲ್ಲಾಪುರ-ಮಂಗಳೂರು ರಸ್ತೆ ಅಭಿವೃದ್ಧಿಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

ತೀರ್ಥಹಳ್ಳಿ-ಉಡುಪಿ ರಸ್ತೆಯಲ್ಲಿ 8.20 ಕೋಟಿ ರೂ. ವೆಚ್ಚದಲ್ಲಿ 3 ಕಿರು ಸೇತುವೆ ನಿರ್ಮಾಣ, ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 20 ಕೋಟಿ ರೂ. ವೆಚ್ಚದಲ್ಲಿ 7 ಕಿರು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಸಿಆರ್‌ಎಫ್‌ ಯೋಜನೆಯಡಿ ಇನ್ನೂ 400ಕೋಟಿ ರೂ. ಯೋಜನೆಗಳ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

Advertisement

ಶಿವಮೊಗ್ಗ ನಗರದಲ್ಲಿ 3200 ಮೀಟರ್‌ ಉದ್ದದರನ್‌ವೇ ಸೌಲಭ್ಯ ಹೊಂದಿರುವ ವಿಮಾನ ನಿಲ್ದಾಣ ಕಾಮಗಾರಿ ಮುಂದಿನ ಒಂದು ವರ್ಷದಲ್ಲಿಪೂರ್ಣಗೊಳ್ಳಲಿದೆ. ತುಂಗಾ ನದಿಯಿಂದ ಜಿಲ್ಲೆಯ 1500 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನುಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರುಮಾತನಾಡಿ, ರಾಜ್ಯದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆಕೇಂದ್ರ ಸರ್ಕಾರ ಹೆಚ್ಚಿನ ಅನುದಾನ ಒದಗಿಸಿದೆ. 5612 ಕಿಮೀ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪಿಎಂಜಿಎಸ್‌ವೈ ಯೋಜನೆಯಡಿ 3660ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.

ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಉದ್ಘಾಟನೆ: ಕೇಂದ್ರ ಭೂ ಸಾರಿಗೆ ಸಚಿವ ನಿತೀನ್‌ ಗಡ್ಕರಿ ಅವರು ಈಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ನೆರವೇರಿಸಿದರು.

ವಿಧಾನ ಪರಿಷತ್‌ ಸದಸ್ಯರಾದ ಅಯನೂರು ಮಂಜುನಾಥ, ರುದ್ರೇಗೌಡ, ಶಾಸಕ ಅರಗ ಜ್ಞಾನೇಂದ್ರ, ಮೇಯರ್‌ ಸುವರ್ಣ ಶಂಕರ್‌, ಉಪ ಮೇಯರ್‌ ಸುರೇಖಾ ಮುರಳೀಧರ್‌, ಆರ್ಯ ವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್‌.ಅರುಣ್‌, ಪೊಲೀಸ್‌ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next