Advertisement

ಮಾದರಿ ತಾಲೂಕಾಗಿಸಲು ಯತ್ನ: ರೇಣುಕಾಚಾರ್ಯ

04:53 PM Aug 24, 2020 | Suhan S |

ಹೊನ್ನಾಳಿ: ಅಭಿವೃದ್ಧಿ ಕೇವಲ ಮಾತಾಗಬಾರದು. ಅದನ್ನು ಕಾರ್ಯರೂಪಕ್ಕೆ ತರಬೇಕು. ಅದೇ ರೀತಿ ನುಡಿದಂತೆ ನಡೆಯುವ ಮೂಲಕ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕುಗಳ ಪ್ರತಿಯೊಂದು ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತಿದ್ದೇನೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

Advertisement

ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಭಾನುವಾರ 5.30 ಕೋಟಿ ರೂ.ಗಳ ವೆಚ್ಚದಲ್ಲಿ ಸಿಸಿ ರಸ್ತೆ, ಬಾಲಕರ ವಿದ್ಯಾರ್ಥಿನಿಲಯ,ಶಾಲಾ ಕೊಠಡಿಗಳನ್ನು ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈ ಹಿಂದೆಎರಡು ಬಾರಿ ಶಾಸಕನಾಗಿದ್ದಾಗಲೂ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ವಿವಿಧ ಹಳ್ಳಿಗಳಿಗೆ ಹೆಚ್ಚು ಅನುದಾನ ತಂದು ಅಭಿವೃದ್ಧಿಪಡಿಸಲಾಗಿತ್ತು. ಅದೇ ರೀತಿ ಈ ಬಾರಿ ಒಂದು ವರ್ಷದ ಅವಧಿಯಲ್ಲಿ ನೂರಾರು ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅವಳಿ ತಾಲೂಕುಗಳನ್ನು ಧೂಳು ಮುಕ್ತ ಮಾಡುವ ಮೂಲಕ ಮಾದರಿ ತಾಲೂಕುಗಳನ್ನಾಗಿ ಮಾಡುತ್ತೇನೆಂದರು.

ಕೋಟೆಮಲ್ಲೂರು ಗ್ರಾಮದಲ್ಲಿ 40 ಲಕ್ಷ ರೂ.ಗಳ ವೆಚ್ಚದಲ್ಲಿ ಹೊಳೆಮೆಟ್ಟಿಲು, 50 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಸಿಸಿ ರಸ್ತೆ, ಕೋಟೆಮಲ್ಲೂರು ತಾಂಡದಲ್ಲಿ 3.75 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ ಡಾಂಬರ್‌ ರಸ್ತೆ, ಸಿಸಿ ರಸ್ತೆಯನ್ನು ಶಾಸಕರು ಉದ್ಘಾಟಿಸಿದರು. ಹೊನ್ನೂರು ವಡ್ಡರಹಟ್ಟಿಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಚೆಕ್‌ಡ್ಯಾಂ, 1.18 ಕೋಟಿ ರೂ. ವೆಚ್ಚದ ಸಿಸಿ ರಸ್ತೆಗಳಿಗೆ ಭೂಮಿಪೂಜೆ ನೆರವೇರಿಸಲಾಯಿತು. ಹೊನ್ನೂರು ವಡ್ಡರಹಟ್ಟಿ ತಾಂಡದಲ್ಲಿ 60 ಲಕ್ಷ ರೂ.ಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next