Advertisement

ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್

12:48 PM Apr 23, 2022 | Team Udayavani |

ಕೊರಟೆಗೆರೆ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಕ್ಷೇತ್ರ ಅಭಿವೃದ್ಧಿಯೇ ನನ್ನ ಉದ್ದೇಶ ಎಂದು ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು.

Advertisement

ತಾಲೂಕಿನ ಕೋಳಾಲ ಹೋಬಳಿಯ ಸುಮಾರು 5 ಕೋಟಿಯ ಹಲವು ಕಾಮಗಾರಿಗಳನ್ನು ನೀಲಗೊಂಡನಹಳ್ಳಿ, ಎಲೆರಾಂಪುರ, ವಜ್ಜನಕುರಿಕೆ,ಚಿನ್ನಹಳ್ಳಿ ಗ್ರಾ.ಪಂಗಳಲ್ಲಿನ ಹಲವು ಗ್ರಾಮಗಳ ಸಿಸಿ ರಸ್ತೆ,ಶಾಲಾ ಕಟ್ಟಡ, ಸಮುದಾಯ ಭವನ, ಗ್ರಾ.ಪಂ ಕಟ್ಟಡ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿ ಮಾತನಾಡಿದರು.

ವಸತಿ ಸಚಿವ ಸೋಮಣ್ಣ ಅವರಿಂದ 5 ಸಾವಿರ  ಮನೆಯನ್ನು ಮಂಜೂರು ಮಾಡಿಸಿಕೊಂಡಿದ್ದು ಗ್ರಾಮ ಸಭೆಗಳನ್ನು ನಡೆಸಿ ಅರ್ಹ ಫಲಾನುಭವಿಗಳಿಗೆ ಮನೆ ವಿತರಿಸಿಸುವುದಾಗಿ ಹೇಳಿದರು.

ಪ್ರತಿ ಹಂತದಲ್ಲಿಯೂ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ನನ್ನ ನಿರಂತರ ಪ್ರಯತ್ನ ಇದ್ದೇ ಇರುತ್ತದೆ. ನಾನು ಕ್ಷೇತ್ರದಲ್ಲಿ 15 ವರ್ಷದಿಂದ ಸ್ಪರ್ಧೆ ಮಾಡುತ್ತಿದ್ದೇನೆ ಆದರೆ ನನಗೆ ಸಿಕ್ಕಿರುವಂತಹ ಒಂಬತ್ತು ವರ್ಷ ಆಕಾಶದಲ್ಲಿ ಸ್ಮರಣೀಯ ಕೆಲಸಗಳನ್ನು ಕ್ಷೇತ್ರದಲ್ಲಿ ಮಾಡಿದ್ದೇನೆ ಎಂದು ತಿಳಿಸಿದರು.

ಸಿಂಗ್ರಿಹಳ್ಳಿ ಗ್ರಾಮದಲ್ಲಿ 30 ಮತ್ತು ವಜ್ಜನಕುರಿಕೆ ಗ್ರಾಮದಲ್ಲಿ ವಯೋವೃದ್ಧ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳಿಗೆ ಕಂದಾಯ ಇಲಾಖೆಯ ವತಿಯಿಂದ ಶಾಸಕರ ನೇತೃತ್ವದಲ್ಲಿ ಪಿಂಚಣೆ ಆದೇಶ ಪ್ರತಿಗಳನ್ನು ವಿತರಿಸಲಾಯಿತು.

Advertisement

ಎಲೆರಾಂಪುರ ಗ್ರಾ.ಪಂ ವ್ಯಾಪ್ತಿಯ ಸಿಂಗ್ರಿಹಳ್ಳಿ ಗ್ರಾಮಸ್ಥರು, ಗ್ರಾಮಕ್ಕೆ ಸರಕಾರಿ ಬಸ್, ಪಶು ಆಸ್ಪತ್ರೆ, ಅಂಬೇಡ್ಕರ್ ಭವನ, ಗ್ರಾಮ ಲೆಕ್ಕಿಗರ ನಿವಾಸ ದುರಸ್ಥಿ, ಗ್ರಾಮದಲ್ಲಿನ ತಿಮ್ಮಪ್ಪ ಸ್ವಾಮಿ ದೇವಾಲಯವನ್ನು ಅಭಿವೃದ್ಧಿ ಪಡಿಸುವುದು ಸೇರಿದಂತೆ ಇತರೆ ಕೆಲಸಗಳನ್ನು ಮಾಡಿಕೊಡುವಂತೆ ಶಾಸಕರನ್ನು ಮನವಿ ಮಾಡಿದರು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕ ಎಲ್ಲವನ್ನೂ ಪೂರೈಸುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ  ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರಕೆರೆ ಶಂಕರ್, ತಹಶೀಲ್ದಾರ್ ನಹೀದಾ ಜಮ್ ಜಮ್,ವಜ್ಜನಕುರಿಕೆ ಗ್ರಾ.ಪಂ ಅಧ್ಯಕ್ಷ ನಾಗೇಂದ್ರ, ಎಲೆರಾಂಪುರ ಗ್ರಾ.ಪಂ ಗಂಗಾಭಿಕೆ, ಉಪಾಧ್ಯಕ್ಷ ಉಮೇಶ್ ಚಂದ್ರ, ನೀಲಗೊಂಡನಹಳ್ಳಿ ಗ್ರಾ.ಪಂ ಉಪಾಧ್ಯಕ್ಷ ಕಿರಣ್ ಕುಮಾರ್, ಬಿಇಒ ಸುಧಾಕರ್, ಎಇಇ ರವಿಕುಮಾರ್ ಸೇರಿದಂತೆ ಇತರರು ಇದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next