Advertisement

ಚುನಾವಣಾ ಪೂರ್ವ ಸಿದ್ಧತೆ : ಸಪ್ಟೆಂಬರ್ 20 ರಂದು ದೇವೇಂದ್ರ ಫಡ್ನವೀಸ್ ಗೋವಾಕ್ಕೆ

12:46 PM Sep 18, 2021 | Team Udayavani |

ಪಣಜಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಗೋವಾ ವಿಧಾನಸಭಾ ಚುನಾವಣೆಯ ಬಿಜೆಪಿ ಪ್ರಭಾರಿ ದೇವೇಂದ್ರ ಫಡ್ನವೀಸ್ ಸಪ್ಟೆಂಬರ್ 20 ರಂದು ಗೋವಾಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿ ಹಾಗೂ ಕಾರ್ಯಕರ್ತರೊಂದಿಗೆ ಚುನಾವಣೆಗೆ ಸಂಬಂಧಿಸಿದಂತೆ ಸಂವಾದ ನಡೆಸಲಿದ್ದಾರೆ.

Advertisement

2022 ರ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಬಿಜೆಪಿ ಚುನಾವಣಾ ಪೂರ್ವ ಸಿದ್ಧತಾ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಬಿಜೆಪಿ ರಾಷ್ಟ್ರೀಯ ನಾಯಕರು ಗೋವಾಕ್ಕೆ ಆಗಮಿಸುತ್ತಿದ್ದು ಪಕ್ಷದ ನಾಯಕರು, ಕಾರ್ಯಕರ್ತರೊಂದಿಗೆ ಈಗಾಗಲೇ ಹಲವು ಸಭೆ ನಡೆಸಿದ್ದಾರೆ.

ಸಪ್ಟೆಂಬರ್ 20 ರಂದು ಬಿಜೆಪಿ ಗೋವಾ ವಿಧಾನಸಭಾ ಚುನಾವಣೆಯ ಪ್ರಭಾರಿ ದೇವೇಂದ್ರ ಫಡ್ನವೀಸ್ ಗೋವಾಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ :ಇಂದು ಚಂದ್ರ-ಗುರು ಸಮಾಗಮ : ರಾತ್ರಿಯಿಡೀ ಜತೆಯಲ್ಲೇ ಕಾಲಕಳೆಯಲಿವೆಯಂತೆ ಈ ಗ್ರಹಗಳು

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next