Advertisement

‘ಮಹಾ’ ರಾಜಕೀಯ: ಮಹಾರಾಷ್ಟ್ರದ ಸಿಎಂ ಆಗಿ ದೇವೆಂದ್ರ ಫಡ್ನವೀಸ್ ಪ್ರಮಾಣ ವಚನ

09:49 AM Nov 24, 2019 | Mithun PG |

ಮುಂಬೈ: ಒಂದು ತಿಂಗಳ ರಾಜಕೀಯ ಹಗ್ಗಜಗ್ಗಾಟದ ನಂತರ ಮಹಾರಾಷ್ಟ್ರದ ಸಿಎಂ ಆಗಿ ದೇವೆಂದ್ರ ಫಡ್ನವೀಸ್ ಮತ್ತೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Advertisement

ಕಾಂಗ್ರೆಸ್ ಮತ್ತು ಶಿವಸೇನೆ ಜೊತೆ ಕಾಣಿಸಿಕೊಂಡಿದ್ದ ಶರದ್ ಪವಾರ್ ನೇತೃತ್ವದ ಎನ್ ಸಿಪಿ ರಾತ್ರಿ ಬೆಳಗಾಗುವುದರೊಳಗೆ ಬಿಜೆಪಿ ಜೊತೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.

ಎನ್ ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇಂದು ಮುಂಜಾನೆ 8.05ಕ್ಕೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಪ್ರಮಾಣ ವಚನ ಬೋಧಿಸಿದರು.

ರಾಜ್ಯಪಾಲ ಕೋಶ್ಯಾರಿ ಅವರು ರಾಜ್ಯದಲ್ಲಿರುವ ರಾಷ್ಟ್ರಪತಿ ಆಡಳಿತವನ್ನು ಕೊನೆಗೊಳಿಸುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next