ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಲೇವಡಿ ಮಾಡಿದ್ದು ಹೀಗೆ. ನಾಯಕ, ವಿಶ್ವಕರ್ಮ ಸೇರಿ ಸಣ್ಣ ಸಣ್ಣ ಸಮುದಾಯಗಳ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕಾಳಜಿ ಇರಲಿಲ್ಲ. ನಾನು ಆ ಸಮುದಾಯಗಳ ಸಮಾವೇಶ ಮಾಡಿದ ನಂತರ ಎಚ್ಚೆತ್ತುಕೊಂಡಿವೆ. ಆ ಸಮುದಾಯಗಳು ದೇವೇಗೌಡರ ಪರ ವಾಲಿಬಿಟ್ಟರೆ ಎಂಬ ಭಯ ಕಾಂಗ್ರೆಸ್, ಬಿಜೆಪಿಗಿದೆ. ಆದರೆ ಇದರಿಂದ ದೃತಿಗೆಡಬೇಕಿಲ್ಲ ಎದರು.
Advertisement
ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ನಮ್ಮ ಸಾಧನೆ ತಿಳಿಸುವ ಕೆಲಸವನ್ನು ಶಾಸಕರಿಂದ ಹಿಡಿದು ಕಾರ್ಯಕರ್ತರವರೆಗೆ ಮಾಡಬೇಕೆಂದು ತಿಳಿಸಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಜೆಡಿಎಸ್ ಕಣಕ್ಕಿಳಿಯಲಿದ್ದು ನಮ್ಮ ಅಳಿವು- ಉಳಿವಿನ ಪ್ರಶ್ನೆಯಾಗಿದೆ ಎಂದು ಹೇಳಿದರು. ಮುಂದಿನ ಚುನಾವಣೆಯನ್ನು ಜೆಡಿಎಸ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ಎಲ್ಲ ಕಡೆಸ್ಪರ್ಧಿಸಿ ನಮ್ಮ ಶಕ್ತಿ ಪ್ರದರ್ಶನ ಮಾಡಲೇಬೇಕಾಗಿದೆ ಎಂದು ತಿಳಿಸಿದರು.
ಹೊರಟ್ಟಿ, ಜಿ.ಟಿ.ದೇವೇಗೌಡ, ಎಚ್.ಡಿ. ರೇವಣ್ಣ, ಸಂಸದ ಸಿ.ಎಸ್.ಪುಟ್ಟರಾಜು, ಕುಪೇಂದ್ರರೆಡ್ಡಿ ಉಪಸ್ಥಿತರಿದ್ದರು. ಎರಡು ಗಂಟೆ ತಂಡ: ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಸಂಜೆ ಐದು ಗಂಟೆಗೆ ನಿಗದಿಯಾಗಿತ್ತಾದರೂ ಎರಡು ಗಂಟೆ ತಡವಾಗಿ ಆರಂಭವಾಯಿತು.