ಮೈಸೂರು: ಇಲ್ಲಿನ ಸಾಲಿಗ್ರಾಮ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಂಗಳ ಮುಖಿ ದೇವಿಕ ಹಾಗೂ ಉಪಾಧ್ಯಕ್ಷರಾಗಿ ಸುಧಾರೇವಣ್ಣ ಅವಿರೋಧವಾಗಿ ಆಯ್ಕೆಯಾದ್ದಾರೆ.
ರಾಜ್ಯದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮಂಗಳ ಮುಖಿಯೊಬ್ಬರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಾಲಿಗ್ರಾಮ ಗ್ರಾಮ ಪಂಚಾಯತ್ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದು, ದೇವಿಕ ಹಾಗೂ ಲಕ್ಷ್ಮೀ ಸೋಮಶೇಖರ್ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಹೆಚ್.ಎಸ್.ಸುಧಾರೇವಣ್ಣ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರೇ ಅವಿರೋಧವಾಗಿ ಆಯ್ಕೆಯಾದ್ದಾರೆ.
ಇದನ್ನೂ ಓದಿ:ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಖ್ಯಾತ ಪಾಪ್ ತಾರೆ ರಿಹಾನಾ v/s ಕಂಗನಾ ?
ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಲಕ್ಷ್ಮೀ ಸೋಮಶೇಖರ್ ನಾಮಪತ್ರ ವಾಪಸ್ಪಡೆದ ಹಿನ್ನೆಲೆಯಲ್ಲಿ ಮಂಗಳ ಮುಖಿ ದೇವಿಕ ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಶಶಿಧರ್ ಹಾಗೂ ಪಿಡಿಒ ಮಂಜುನಾಥ್ ತಿಳಿಸಿದರು.