Advertisement

ಗುಜರಾತ್ ಗಲಭೆ; ಪ್ರಧಾನಿ ಮೋದಿಗೆ ಕ್ಲೀನ್ ಚಿಟ್- ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ

11:23 AM Jun 24, 2022 | Team Udayavani |

ನವದೆಹಲಿ:ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ (ಜೂನ್ 23) ವಜಾಗೊಳಿಸಿದೆ.

Advertisement

ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 17,336 ಕೋವಿಡ್ ಪ್ರಕರಣ ದೃಢ: ನಾಲ್ಕು ತಿಂಗಳ ಗರಿಷ್ಠ ಪ್ರಮಾಣ

2002ರ ಗುಜರಾತ್ ಗಲಭೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ 63 ಮಂದಿಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ ಕಾಂಗ್ರೆಸ್ ಮುಖಂಡ ಎಹ್ಸಾನ್ ಜಾಫ್ರಿ ಅವರ ಪತ್ನಿ ಜಾಕಿಯಾ ಜಾಫ್ರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

2002ರ ಫೆಬ್ರವರಿ 28ರಂದು ಅಹಮಹಾಬಾದ್ ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಹಿಂಸಾಚಾರದಲ್ಲಿ ಎಹ್ಸಾನ್ ಜಾಫ್ರಿ ಸಾವನ್ನಪ್ಪಿದ್ದರು. ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.

ಎಸ್ ಐಟಿ ಕ್ಲೀನ್ ಚಿಟ್ ವಿರುದ್ಧ ಜಾಫ್ರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, 2002ರಲ್ಲಿ ಗುಜರಾತ್ ಸಿಎಂ ಆಗಿದ್ದ, ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರ 63 ಮಂದಿಗೆ ಕ್ಲೀನ್ ಚಿಟ್ ನೀಡಿರುವ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ.

Advertisement

ಪ್ರಧಾನಿ ಮೋದಿಗೆ ಕ್ಲೀನ್ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗೆ ಯಾವುದೇ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ಎಸ್ ಐಟಿ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ ಹಾಗೂ ಜಾಫ್ರಿಯಾ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next