ಉಜ್ಜೈನಿ: ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಉಜ್ಜೈನಿಯ ಮಹಾಕಾಲೇಶ್ವರ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆ ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗರ್ಭಗುಡಿಗೆ ಭಕ್ತರ ಪ್ರವೇಶನ್ನು ಶನಿವಾರದಿಂದ ಹತ್ತು ದಿನಗಳ ಕಾಲ ನಿರ್ಬಂಧಿಸಲಾಗಿದೆ.
ಜ.5ರವರಗೆ ನಿರ್ಬಂಧ ಇರಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.
“ವರ್ಷಾಂತ್ಯ ಹಿನ್ನೆಲೆಯಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿದೆ. ಪ್ರತಿಯೊಬ್ಬರಿಗೂ ಮಹಾಕಾಲೇಶ್ವರನ ದರ್ಶನ ದೊರೆಯಲಿ ಎಂದು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ದೇಗುಲದ ಒಳಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದಕ್ಕೆ ನಿಷೇಧವಿದೆ,’ ಎಂದು ಜಿಲ್ಲಾಧಿಕಾರಿ ಆಶಿಶ್ ಸಿಂಗ್ ತಿಳಿಸಿದ್ದಾರೆ.
ದೇಶದಲ್ಲಿರುವ 12 ಜ್ಯೋತಿರ್ಲಿಂಗಗಳ ಪೈಕಿ ಮಹಾಕಾಲೇಶ್ವರ ಕೂಡ ಒಂದು.