Advertisement

ಕುಕ್ಕೆ: ಭಾರೀ ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ

02:02 PM Jun 05, 2022 | Team Udayavani |

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರವಿವಾರ ಭಾರೀ ಭಕ್ತ ಜನರು ಆಗಮಿಸಿದ್ದರು. ಷಷ್ಠಿ, ಆಶ್ಲೇಷ ನಕ್ಷತ್ರ ಮತ್ತು ಶ್ರೀ ದೇವರು ಒಳಾಂಗಣ ಪ್ರವೇಶಿಸುವ ಪುಣ್ಯ ದಿನ ರಜಾದಿನವಾದ ಆದಿತ್ಯವಾರ ಬಂದುದರಿಂದ ಕ್ಷೇತ್ರಕ್ಕೆ ಭಕ್ತ ಸಂದೋಹವೇ ಹರಿದು ಬಂದಿದೆ.

Advertisement

ಇಂದು ಷಷ್ಠಿ,  ಆಶ್ಲೇಷ ನಕ್ಷತ್ರ ಆದ್ದರಿಂದ ಆಶ್ಲೇಷ ಪೂಜೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಮಾಡಿಸಲು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರಿ ಪ್ರಮಾಣದ ಭಕ್ತರ ದಂಡು ಆಗಮಿಸಿದೆ. ರಾಜಗೋಪುರದಿಂದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ವರೆಗೂ ಭಕ್ತರ ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ.

ಶನಿವಾರ ರಾತ್ರಿಯೇ ಕ್ಷೇತ್ರಕ್ಕೆ ಅತ್ಯಧಿಕ ಭಕ್ತರು ಆಗಮಿಸಿದ್ದರು.ಈ ಕಾರಣದಿಂದ ದೇವಳದ ವಸತಿ ಗೃಹ ಹಾಗೂ ಖಾಸಗಿ ವಸತಿ ಗೃಹಗಳು ತುಂಬಿತ್ತು.ಆದುದರಿಂದ ಶ್ರೀ ದೇವಳದ ಷಣ್ಮುಖ ಪ್ರಸಾದ ಭೋಜನ ಶಾಲೆಯ ಮೇಲ್ಮಹಡಿ ಮತ್ತು ಆದಿ ಸುಬ್ರಹ್ಮಣ್ಯ ಕಲ್ಯಾಣ ಮಂಟಪದಲ್ಲಿ ಭಕ್ತರಿಗೆ ತಂಗಲು ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next