ಮಡಿಕೇರಿ: ರಾಷ್ಟ್ರೀಯ ಜಂತು ಹುಳು ನಿವಾರಣ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ ಅವರು ಸೋಮವಾರ ಚಾಲನೆ ನೀಡಿದರು. ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಕ್ಸಿಂಗ್ ಒಳಾಂಗಣ ಕ್ರೀಡಾಂಗಣದಲ್ಲಿ 1ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲೆºಂಡಜೋಲ್ ಮಾತ್ರೆ ವಿತರಿಸಿ ಚಾಲನೆ ನೀಡಿದರು.
Advertisement
ಮಕ್ಕಳು ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು. ಆಟವಾಡಿದ ನಂತರ ಸಾಬೂನಿನಿಂದ ಕೈಕಾಲು ತೊಳೆಯಬೇಕು. ರಕ್ತಹೀನತೆ ಮತ್ತು ಅಪೌಷ್ಟಿಕತೆ ತಡೆಯಬೇಕು. ಆರೋಗ್ಯದ ಕಡೆ ಗಮನಹರಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸತೀಶ್ ಕುಮಾರ್ ಅವರು ಪೂರಕ ಮಾಹಿತಿ ನೀಡಿದರು.