Advertisement
ದೂರುದಾರ ಸಾಮಾಜಿಕ ಅರಣ್ಯ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಮಯೂರ ಅವರು ಆರೋಪಿ ಪೂರ್ಣಿಮಾ ಅವರ ಸೂಚನೆಯಂತೆ ಅರಣ್ಯ ಭವನದ ಬಳಿ ಹಣದ ಕವರ್ ಅನ್ನು ಜೀಪ್‌ನಲ್ಲಿ ಇಡುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದರು.
ಲಂಚ ನೀಡಲು ಒಪ್ಪದೆ ಇದ್ದ ಕಾರಣಕ್ಕಾಗಿ ಸಾರ್ವಜನಿಕವಾಗಿ ನನ್ನನ್ನು ನಿಂದಿಸುತ್ತಿದ್ದರು. ನನಗೆ ಲಂಚ ನೀಡಲು ಇಷ್ಟವಿಲ್ಲದ ಕಾರಣ ದೂರು ನೀಡುತ್ತಿರುವುದಾಗಿ ಮಯೂರ ಲೋಕಾಯುಕ್ತಕ್ಕೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ ಶೇ.60 ಹಣಕ್ಕೆ ಬೇಡಿಕೆ ಇಟ್ಟ ಮೊಬೈಲ್ ಧ್ವನಿ ಮುದ್ರಣವನ್ನು ಕೂಡ ಸಾಕ್ಷಿಯಾಗಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು 50 ಸಾವಿರ ರೂ.ಗಳಿದ್ದ ಕವರ್ ಅನ್ನು ಜೀಪ್‌ನಲ್ಲಿಡುತ್ತಿದ್ದಾಗ ಪೂರ್ಣಿಮಾ ಅವರನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದರು.
———————
ಗಾಂಜಾ ಮಾರಾಟ: ಯುವಕನ ಸೆರೆ
ಮಡಿಕೇರಿ: ಕುಶಾಲನಗರಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಪಿರಿಯಾಪಟ್ಟಣದ ಸುಂಕದಳ್ಳಿ ಗ್ರಾಮ ನಿವಾಸಿ ಎಸ್.ಜಿ. ನಿಶಾಂತ್ (20)ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಬಳಿ ಇದ್ದ 170 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
Related Articles
Advertisement
ಮಾಹಿತಿ ನೀಡಿ ಯುವ ಸಮುದಾಯ ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡು ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆಎಸ್‌ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.