Advertisement

ದಾಖಲೆಗಳ ಭದ್ರತೆಗೆ ರಾಜ್ಯದಲ್ಲಿ ʼಶೈಕ್ಷಣಿಕ ಡಿಜಿ ಲಾಕರ್‌ʼ ವ್ಯವಸ್ಥೆಗೆ ಚಿಂತನೆ; ಡಿಸಿಎಂ

06:03 PM Jan 06, 2021 | Team Udayavani |

ಬೆಂಗಳೂರು: ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ತರಲು ಉನ್ನತ ಶಿಕ್ಷಣ ಸಚಿವರೂ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ.

Advertisement

ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರದ ಕೇಂದ್ರ ಮಟ್ಟದ ಅಧಿಕಾರಿಗಳು ಹಾಗೂ ರಾಜ್ಯದ ಶಿಕ್ಷಣ ಇಲಾಖೆಯ ವಿವಿಧ ಹಂತದ ಉನ್ನತ ಅಧಿಕಾರಿಗಳ ಜತೆ ಉನ್ನತ ಮಟ್ಟದ ಸಭೆ ನಡೆಸಿ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್‌ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಎಂದ ಅವರು ರಾಜ್ಯದ ಶೈಕ್ಷಣಿಕ ಕ್ಷೇತ್ರವನ್ನು ಡಿಜಿಟಲ್‌ನತ್ತ ಕೊಂಡೊಯ್ಯುವ ಇನ್ನೊಂದು ಮಹತ್ವದ ಹೆಜ್ಜೆ ಎಂದಿದ್ದಾರೆ.

ಇದನ್ನೂ ಓದಿ:ಹಕ್ಕಿ ಜ್ವರ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಹೈ ಅಲರ್ಟ್ : ಸಚಿವ ಪ್ರಭು ಚವ್ಹಾಣ್ ಸೂಚನೆ

ಏನಿದು ಶೈಕ್ಷಣಿಕ ಡಿಜಿ ಲಾಕರ್‌?

Advertisement

ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ (National Academic Depository-NAD) ಎಂದು ಕರೆಯಲಾಗುತ್ತದೆ.

ಶೈಕ್ಷಣಿಕ ಡಿಜಿ ಲಾಕರ್‌ ಆಕ್ಸಸ್‌ ಹೇಗೆ?

ಅಂದಹಾಗೆ ಈ ಲಾಕರ್‌ನ ಪ್ರವೇಶ ಸುಲಭ. ಪ್ರತಿ ವಿದ್ಯಾರ್ಥಿಯೂ ತನ್ನ ಆಧಾರ್‌ ಸಂಖ್ಯೆ ಮೂಲಕ National Academic Depository-NAD ಪೋರ್ಟಲ್‌ಗೆ ನೋಂದಣಿ ಮಾಡಿಕೊಳ್ಳಬಹುದು. ಅದರಲ್ಲಿ ತನ್ನ ಇ-ಕೆವೈಸಿಯನ್ನು ತುಂಬಿ ಅಪ್‌ಲೋಡ್‌ ಮಾಡಿದ ನಂತರ ತನ್ನೆಲ್ಲ ದಾಖಲೆಗಳನ್ನು ಯಾವುದೇ ವಿದ್ಯಾರ್ಥಿಯೂ ಆಕ್ಸೆಸ್‌ ಮಾಡಬಹುದು.

Advertisement

Udayavani is now on Telegram. Click here to join our channel and stay updated with the latest news.

Next