Advertisement
ಇಲ್ಲಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಭವನದಲ್ಲಿ ಸಭೆ ನಡೆಸಿದ ಡಿಜಿಪಿ ಪ್ರವೀಣ ಸೂದ್ ಅವರು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಹೊಸ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಸೂಚನೆ ನೀಡಿದರು.
ಚಟುವಟಿಕೆಗಳ ಬಗ್ಗೆ ಸಮಗ್ರ ವರದಿ ಪಡೆದು ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಹೇಳಿದರು. ಪೊಲೀಸ್ ಇಲಾಖೆಯಲ್ಲಿಯ ಆಡಳಿತಾತ್ಮಕ ವಿಷಯಗಳಲ್ಲಿಯ ಪ್ರಮುಖ ಅಂಶಗಳನ್ನು ತಿಳಿದುಕೊಂಡು ಆಯಾ ತಾಲೂಕಿನಲ್ಲಿಯ ಆಡಳಿತದ ಬಗ್ಗೆ ಪರಿಶೀಲನೆ
ನಡೆಸಿದರು. ಇದನ್ನೂ ಓದಿ:5,375 ಕೋಟಿ ರೂ ಮೊತ್ತದಲ್ಲಿ ‘ಎಫ್404–ಜಿಇ–ಐಎನ್ 20’ ಎಂಜಿನ್ ಖರೀದಿಸಲಿದೆ ಎಚ್‌ಎಎಲ್..!
Related Articles
Advertisement
ಕೋವಿಡ್ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚುತ್ತಿರುವುದರಿಂದ ಗಡಿ ಭಾಗದಲ್ಲಿ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ. ಬೆಳಗಾವಿ ಜಿಲ್ಲೆ ಪ್ರವೇಶಿಸುವ ಪ್ರಯಾಣಿಕರ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯವಾಗಿ ಪರಿಶೀಲಿಸಿಯೇ ಬಿಡಲಾಗುತ್ತಿದೆ. ನೆಗೆಟಿವ್ ವರದಿ ಇಲ್ಲದವರ ವಾಹನಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಕೊಗನೊಳ್ಳಿ, ಕಾಗವಾಡ ಸೇರಿದಂತೆ ಅನೇಕ ಕಡೆಗೆ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.
ಉತ್ತರ ವಲಯ ಐಜಿಪಿ ಸತೀಶಕುಮಾರ್ ಸೇರಿದಂತೆ ಜಿಲ್ಲೆಯ ಡಿಎಸ್‌ಪಿ, ಸಿಪಿಐ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಇದ್ದರು.ಇದಕ್ಕೂ ಮುನ್ನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್ ಅವರು ಪೊಲೀಸ್ ಕಮೀಷನರೇಟ್ ಕಚೇರಿ ಕಟ್ಟಡ ನಿರ್ಮಾಣ ಬಗ್ಗೆ ಪರಿಶೀಲನೆ ನಡೆಸಿದರು. ನಂತರ ಪೊಲೀಸ್ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿ, ವೀಕ್ಷಿಸಿದರು. ಖಾನಾಪುರದ ಪೊಲೀಸ್ ತರಬೇತಿ ಶಾಲೆಗೆ ಭೇಟಿ ನೀಡಿದರು. ಪೊಲೀಸ್ ಕೇಂದ್ರ ಸ್ಥಾನಕ್ಕೆ ಭೇಟಿ ನೀಡಿ ಪೊಲೀಸ್ ಕಲ್ಯಾಣ ಕಾರ್ಯಕ್ರಮಗಳು ಹಾಗೂ ವಸತಿಗೃಹಗಳ ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸಿದರು