ಹೊಸದಿಲ್ಲಿ: ಕರ್ನಾಟಕ ಕೇಡರ್ ನ 1986ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರನ್ನು ಉನ್ನತ ಮಟ್ಟದ ಆಯ್ಕೆ ಸಮಿತಿಯು ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಿದೆ.
ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಸೇವೆ ಸಲ್ಲಿಸುತ್ತಿರುವ ಸೂದ್ ಅವರಿಗೆ ಹೊಸ ಜವಾಬ್ದಾರಿ ನೀಡಲಾಗಿದೆ.
ಇದನ್ನೂ ಓದಿ:C.T.Ravi ಸೋಲಿನ ಮಾಸ್ಟರ್ ಮೈಂಡ್ ಭೋಜೇಗೌಡರಿಗೆ ಹಾಲಿನ ಅಭಿಷೇಕ
ಪ್ರಧಾನಿ ನರೇಂದ್ರ ಮೋದಿ ಅವರನ್ನೊಳಗೊಂಡ ಆಯ್ಕೆ ಸಮಿತಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರವೀಣ್ ಸೂದ್ ಅವರನ್ನು ಮುಂದಿನ ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲು ಸರ್ವಾನುಮತದಿಂದ ಆಯ್ಕೆ ಮಾಡಿದೆ.
ಪ್ರಸ್ತುತ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರಾವಧಿಯು ಮೇ 25 ರಂದು ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ.