Advertisement

ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

06:55 PM Mar 25, 2021 | Team Udayavani |

ಧಾರವಾಡ : ಭಾರತ ಸರಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ವಿವಿಧ ಸಂಘ, ಸಂಸ್ಥೆ, ಶಾಲಾ ಕಾಲೇಜುಗಳ ಸಹಯೋಗದಲ್ಲಿ ಒಂದು ವರ್ಷ ಪೂರ್ತಿ ಪ್ರತಿ ವಾರದ ಒಂದು ದಿನ ವಿಭಿನ್ನ ಕಾರ್ಯಕ್ರಮ ಆಯೋಜಿಸಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾಗಿರುವ ವಂದಿತಾ ಶರ್ಮಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಜರುಗಿದ ನಂತರ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಜರುಗಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಜಿಲ್ಲೆಯ ನಾಯಕರು, ನಾಗರಿಕರು ಮಹತ್ವದ ಪಾತ್ರ ನಿರ್ವಹಿಸಿದ್ದಾರೆ. ಅನೇಕರು ತಮ್ಮ ಆಸ್ತಿ, ಜೀವ ತ್ಯಾಗ ಮಾಡಿದ್ದಾರೆ. ಗುಂಡಿಗೆ ಬಲಿಯಾಗಿದ್ದಾರೆ.

ಅವರ ಸೇವೆ, ಬಲಿದಾನ ಸ್ಮರಿಸಿ, ಗೌರವಿಸುವುದು ನಮ್ಮ ಕರ್ತವ್ಯ ಎಂದರು. ಸ್ವಾತಂತ್ರÂದ ಅಮೃತ ಮಹೋತ್ಸವ ಆಚರಿಸುವ ಮೂಲಕ ಇಂದಿನ ಯುವ ಪೀಳಿಗೆಗೆ ಇತಿಹಾಸದಲ್ಲಿ ದಾಖಲಾಗಿರುವ ನಮ್ಮ ನಾಯಕರ ಹೋರಾಟ, ಸ್ವಾತಂತ್ರ್ಯ ಸಂಗ್ರಾಮ ಕುರಿತು ಜಾಗೃತಿ ಮೂಡಿಸುವ, ಜಿಲ್ಲೆಯ ಜನರಲ್ಲಿ ಹೆಮ್ಮೆ ಮೂಡಿಸುವಂತಹ ಅರ್ಥಪೂರ್ಣ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಂಘಟಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ, ಕ್ರೀಡಾ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸೂಚಿಸಿದರು.

ವರ್ಷ ಪೂರ್ತಿಯಾಗಿ ಪ್ರತಿ ವಾರಕ್ಕೊಂದರಂತೆ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ವಿವಿಧ ಸಂಘ, ಸಂಸ್ಥೆ, ಗ್ರಾಮ ಪಂಚಾಯಿತಿ, ನಗರಸಭೆ, ಮಹಾನಗರ ಪಾಲಿಕೆ ಸೇರಿದಂತೆ ಎಲ್ಲ ಇಲಾಖೆಗಳ ಸಹಯೋಗದಲ್ಲಿ ವಿಚಾರ ಸಂಕಿರಣ, ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ, ಛಾಯಾಚಿತ್ರ ಪ್ರದರ್ಶನ, ಗೋಷ್ಠಿ, ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಜೀವನ-ಸಾಧನೆ, ಸ್ವಾತಂತ್ರ್ಯ ಹೋರಾಟ ಸ್ಥಳಗಳ ಭೇಟಿ ನೀಡುವುದು ಮುಂತಾದ ವಿಭಿನ್ನ ಕಾರ್ಯಕ್ರಮ ಸಂಘಟಿಸಲಾಗುವುದು ಎಂದರು. ಜಿಪಂ ಸಿಇಒ ಡಾ|ಸುಶೀಲಾ ಬಿ., ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಡಿಡಿಪಿಐ ಎಮ್‌.ಎಲ್‌. ಹಂಚಾಟೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ. ಚಿದಂಬರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಜುಳಾ ಯಲಿಗಾರ ಸೇರಿದಂತೆ ಇತರ ಇಲಾಖೆ ಅ ಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next