Advertisement
ಸೋಮವಾರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಢಾಕಾ ಮೇಯರ್ ಮೊಹಮ್ಮದ್ ಸಯೀದ್ ಕೋಕೊನ್ ಹಾಗೂ ಅಧಿಕಾರಿಗಳ ತಂಡದೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಲಿನ್ಯ ನಿಯಂತ್ರಣಕ್ಕೆ ಇತ್ತೀಚೆಗೆ ನಡೆದ ಸಿ-40 ಸಿಟೀಸ್ ಸಮ್ಮೇಳನದಲ್ಲೂ ಢಾಕಾ ಭಾಗವಹಿಸಿತ್ತು. ಆ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಕುರಿತು ಪರಿಶೀಲಿಸಲು ಬಂದಿದ್ದಾರೆ ಎಂದು ತಿಳಿಸಿದರು.
Related Articles
Advertisement
ಅದರಂತೆ ಇಲ್ಲಿನ ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪಡೆದು ಢಾಕಾದಲ್ಲಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು. ಉಪಮೇಯರ್ ಭದ್ರೇಗೌಡ, ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹಾಜರಿದ್ದರು.
ನಮ್ಮಲ್ಲಿ ರಾತ್ರಿ, ನಿಮ್ಮಲ್ಲಿ ಹಗಲು: ಢಾಕಾದಲ್ಲಿ ತ್ಯಾಜ್ಯವನ್ನು ರಾತ್ರಿಯಿಂದ ಮುಂಜಾನೆ ಮೂರು ಗಂಟೆವರೆಗೆ ಮಾತ್ರ ವಿಲೇವಾರಿ ಮಾಡಲಾಗುತ್ತದೆ. ಆದರೆ ಬೆಂಗಳೂರಿನಲ್ಲಿ ಬೆಳಗಿನ ವೇಳೆ ತ್ಯಾಜ್ಯ ಸಂಗ್ರಹಿಸಲಾಗುತ್ತಿದೆ. ತ್ಯಾಜ್ಯ ವಿಲೇವಾರಿಗೆ ಯಾವ ಸಮಯ ಸೂಕ್ತ ಎಂದು ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದ ಕೋಕೊನ್, ಢಾಕಾಗೆ ಭೇಟಿ ನೀಡುವಂತೆ ಬಿಬಿಎಂಪಿ ಮೇಯರ್, ಉಪಮೇಯರ್ ಹಾಗೂ ಅಧಿಕಾರಿಗಳನ್ನು ಆಹ್ವಾನಿಸಿದ್ದೇವೆ ಎಂದು ಹೇಳಿದರು.