ಢಾಕಾ: ಈ ಬಾರಿಯ ದಸರಾ ಹಬ್ಬದ ನಂತರ, ಬಾಂಗ್ಲಾದೇಶದ ಹಲವೆಡೆ ಹಿಂದೂಗಳ ಮೇಲೆ ದಾಳಿ ನಡೆದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಈವರೆಗೆ 450 ಮಂದಿಯನ್ನು ಬಂಧಿಸಿರುವುದಾಗಿ ಬಾಂಗ್ಲಾದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಸಂಬಂಧಪಟ್ಟಂತೆ 71 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. 450 ಶಂಕಿತರನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖಾ ವಕ್ತಾರರು ತಿಳಿಸಿದ್ದಾರೆ.
ಇದೇ ವೇಳೆ ಧರ್ಮವನ್ನು ಬಳಸಿಕೊಂಡು ಹಿಂಸಾಚಾರಕ್ಕೆ ಪ್ರಚೋದಿಸುವವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಎಂದು ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರು ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. “50 ವರ್ಷಗಳ ಹಿಂದೆ ಪಾಕಿಸ್ತಾನದಿಂದ ಬಾಂಗ್ಲಾದ ಸ್ವಾತಂತ್ರ್ಯವನ್ನು ವಿರೋಧಿಸಿದ್ದ ಕೆಲ ದೇಶೀಯ ಅಂಶಗಳು ಈಗಲೂ ಹಿಂಸೆ ಮತ್ತು ದ್ವೇಷವನ್ನು ಪ್ರಚೋಧಿಸುವ ಕೆಲಸ ಮಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದು ಬಾಂಗ್ಲಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ :“ಕೋವಿಡ್ 2ನೇ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಿ’ : ರಾಜ್ಯಕ್ಕೆ ಕೇಂದ್ರ ಸರ್ಕಾರ ಸೂಚನೆ
ಬಾಂಗ್ಲಾದೇಶದ ಬಗ್ಗೆ ತಸ್ಲಿಮಾ ಬೇಸರ
ಬಾಂಗ್ಲಾದೇಶವು ಇತ್ತೀಚೆಗೆ ಮೂಲಭೂತ ಹಾಗೂ ಜಿಹಾದಿಗಳ ರಾಷ್ಟ್ರವಾಗಿ ಬದಲಾಗುತ್ತಿದೆ ಎಂದು ಆ ದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರಿàನ್ ಬೇಸರ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿನ ಮದರಸಾಗಳಲ್ಲಿ ಮಕ್ಕಳಿಗೆ ಇಸ್ಲಾಂ ಮೂಲಭೂತವಾದವನ್ನು ಬೋಧಿಸಲಾಗುತ್ತಿದೆ. ಇನ್ನು, ಪ್ರಧಾನಿ ಶೇಖ್ ಹಸೀನಾ ಅವರು ಧರ್ಮ ರಾಜಕಾರಣಕ್ಕೆ ಮುಂದಾಗಿರುವುದರಿಂದ ಅಲ್ಲಿನ ವಾತಾವರಣ ಜಿಹಾದಿಗಳ ಪರವಾಗಿ ಬದಲಾಗುತ್ತಿದೆ ಎಂದಿದ್ದಾರೆ.