ಬೆಂಗಳೂರು: ಭಾರತೀಯ ಜನತಾ ಪಕ್ಷ ತ್ಯಜಿಸಿ ಜೆಡಿಎಸ್ ಸೇರಿದ್ದ ಕೇಂದ್ರ ಮಾಜಿ ಸಚಿವ, ಬಿಎಸ್ ವೈ ಆಪ್ತರಾಗಿದ್ದ ಧನಂಜಯ್ ಕುಮಾರ್ ಇದೀಗ ಕಾಂಗ್ರೆಸ್ ಪಕ್ಷದತ್ತ ಮುಖಮಾಡಿದ್ದಾರೆ ಎಂದು ಖಾಸಗಿ ಟಿವಿ ಚಾನೆಲ್ ವರದಿ ಮಾಡಿದೆ.
ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಧನಂಜಯ್ ಕುಮಾರ್ ಅವರು ಹೆಚ್ಚು ಸಕ್ರಿಯವಾಗಿರಲಿಲ್ಲವಾಗಿತ್ತು. ಬಳಿಕ ಮತ್ತೆ ಬಿಜೆಪಿ ಸೇರ್ಪಡೆ ಬಗ್ಗೆ ಊಹಾಪೋಹ ಹಬ್ಬಿತ್ತು. ಇದೀಗ ಕಾಂಗ್ರೆಸ್ ಪಕ್ಷ ಸೇರುವ ಹಿನ್ನೆಲೆಯಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಒಪ್ಪಿಗೆ ಸೂಚಿಸಿರುವುದಾಗಿ ವರದಿ ವಿವರಿಸಿದೆ.
ಶೀಘ್ರವೇ ಕಾಂಗ್ರೆಸ್ ಪಕ್ಷದ ಪಪ್ರಾಥಮಿಕ ಸದಸ್ಯತ್ವ ಪಡೆದುಕೊಂಡು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವುದಾಗಿ ಹೇಳಿರುವ ಧನಂಜಯ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.