Advertisement

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

10:08 AM Apr 12, 2024 | |

ಡಾಲಿ ಧನಂಜಯ್‌ ನಟನೆಯ ಹೊಸ ಸಿನಿಮಾದ ಟೈಟಲ್‌, ಫ‌ಸ್ಟ್‌ಲುಕ್‌ ಪೋಸ್ಟರ್‌ ಯುಗಾದಿ ಹಬ್ಬದ ವೇಳೆ ಬಿಡುಗಡೆಯಾಗಿದೆ.

Advertisement

ಚಿತ್ರಕ್ಕೆ “ಕೋಟಿ’ ಎಂದು ಟೈಟಲ್‌ ಇಡಲಾಗಿದ್ದು, 500 ರೂಪಾಯಿ ನೋಟುಗಳಿಂದ ಟೈಟಲ್‌ ಡಿಸೈನ್‌ ಮಾಡಲಾಗಿದೆ. ಧನಂಜಯ್‌ ಅವರ ಕಣ್ಣುಗಳನ್ನು ಮಾತ್ರ ಬಳಸಿಕೊಂಡ ಪೋಸ್ಟರ್‌ ತಯಾರಿಸಲಾಗಿದೆ. ಕನ್ನಡ ಕಿರುತೆರೆಯಲ್ಲಿ ಬಿಝಿಯಾಗಿದ್ದ ಪರಮ್‌ ಈ ಸಿನಿಮಾದ ನಿರ್ದೇಶಕರು.

ಕೋಟಿ ಕನಸು ಕಾಣುವ ಒಬ್ಬ ಕಾಮನ್‌ ಮ್ಯಾನ್‌ ಕತೆ ಇದು ಎನ್ನುವುದನ್ನು ಶೀರ್ಷಿಕೆ ಹೇಳುವಂತಿದೆ. ದುಡ್ಡಿಗಾಗಿ ಒದ್ದಾಡುವ ಒಬ್ಬ ಸಾಮಾನ್ಯ ಮನುಷ್ಯನ ಭಾವನೆಗಳ ಸುತ್ತ ಸಾಗುವ ಸಿನಿಮಾ ಎನ್ನಲಾಗಿದೆ. ಈ ಸಿನಿಮಾಗೆ ಕತೆ, ಚಿತ್ರಕತೆ ಮತ್ತು ಸಂಭಾಷಣೆಯನ್ನು ಬರೆದು ಸ್ವತಃ ಪರಮ್‌ ನಿರ್ದೇಶನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.

ಜಿಯೋ ಸ್ಟುಡಿಯೋಸ್‌ನ ಜ್ಯೋತಿ ದೇಶಪಾಂಡೆ ಈ ಚಿತ್ರದ ನಿರ್ಮಾಪಕರು. ವಾಸುಕಿ ವೈಭವ್‌ ಹಾಡುಗಳನ್ನು ಸಂಯೋಜನೆ ಮಾಡಿದ್ದರೆ ನೊಬಿನ್‌ ಪೌಲ್‌ ಹಿನ್ನೆಲೆ ಸಂಗೀತ ಕೊಟ್ಟಿದ್ದಾರೆ. ಈ ಸಿನಿಮಾಗೆ ಅರುಣ್‌ ಬ್ರಹ್ಮನ್‌ ಛಾಯಾಗ್ರಹಣವಿದೆ. ಶೀಘ್ರದಲ್ಲೇ ಚಿತ್ರದ ಟೀಸರ್‌ ಬರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next