Advertisement
“ಹಯಗ್ರೀವ, ನಮ್ಮ ಕೆವಿಸಿ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್, ನಾನು ಯೂಟ್ಯೂಬ್‌ನಲ್ಲಿ “ದಿ ಬೆಲ್’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ ನಿರ್ದೇಶಕ ರಘುಕುರ್ಮಾ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೂಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ’ ಎಂದರು.
Advertisement
Kannada Cinema: ಹಯಗ್ರೀವನಾದ ಧನ್ವೀರ್; ಹೊಸ ಚಿತ್ರಕ್ಕೆ ಮುಹೂರ್ತ
12:01 PM Feb 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.