Advertisement
ರಜಪೂತ ಸಮಾಜದ ಜಿಲ್ಲಾಧ್ಯಕ್ಷ ಸಂಜೀವಕುಮಾರ ರಾಯಚೂರಕರ್ ಮಾಜಿ ಮುಖ್ಯಮಂತ್ರಿ ಎನ್. ಧರ್ಮಂಸಿಂಗ್ ಅವರ ಭಾವಚಿತ್ರಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಎರಡು ನಿಮಿಷ ಮೌನಾಚರಣೆ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಸೋಹನ ಪ್ರಸಾದ, ದಶರಥಸಿಂಗ್ ಠಾಕೂರ, ಉದಯ ಸಿಂಗ್, ಸತ್ಯನಾರಾಯಣ ತೀವಾರಿ, ಸಂದೀಪ್‌ಸಿಂಗ್ ಠಾಕೂರ, ಮಹೇಶಕುಮಾರ, ರಘುವೀರಸಿಂಗ್ ಠಾಕೂರ್, ಮಹೇಶ ಪ್ರಸಾದ್, ವಿಕ್ರಮಸಿಂಗ್ ಠಾಕೂರ್ ಇದ್ದರು.
Related Articles
Advertisement
ಯಾದಗಿರಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರ ನಿಧನ ಹಿನ್ನೆಲೆಯಲ್ಲಿ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಅನೇಕ ಜನಪರ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಕ್ಷೇತ್ರ ಅಭಿವೃದ್ಧಿ ಪಡಿಸಲು ಸಾಕಷ್ಟು ಸಹಕರಿಸಿದ್ದರು ನನ್ನ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಭೀಮಾನದಿಗೆ ಅಡ್ಡಲಾಗಿ ಬ್ರಿಡ್ಜ್ ಕಮ್ ಬ್ಯಾರೇಜ್ ಉದ್ಘಾಟನೆ ಮಾಡಿ ಸಾವಿರಾರು ಜನ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಇಂತಹ ಮಹಾನ್ ನಾಯಕನನ್ನು ಕರ್ನಾಟಕ ಕಳೆದು ಕೊಂಡ್ಡಿದ್ದು ರಾಜ್ಯಕ್ಕೆ ಹಾಗೂ ರಾಷ್ಟ್ರಕ್ಕೆ ತುಂಬಾಲಾರದ ನಷ್ಟವಾಗಿದೆ ಎಂದು ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ ಶೋಕ ವ್ಯಕ್ತಪಡಿಸಿದ್ದಾರೆ.
ಧರಂ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ನಿಯಂತ್ರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಬಿಜೆಪಿ ಮುಖಂಡರಾದ ನಾಗರತ್ನಾ ಕುಪ್ಪಿ, ವೆಂಕಟರೆಡ್ಡಿಗೌಡ ಮುದ್ನಾಳ್, ಚಂದ್ರಶೇಖರ್ ಗೌಡ ಮಾಗನೂರ್, ಡಾ| ಶರಣಭೂಪಾಲರೆಡ್ಡಿ ನಾಯ್ಕಲ್, ಎಸ್.ಪಿ ನಾಡೇಕರ್ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.