Advertisement

ಧರಂ-ಖರ್ಗೆ ಕೊಡುಗೆ ಅಪಾರ: ಸಚಿವ ಪಾಟೀಲ

03:46 PM May 02, 2017 | |

ಜೇವರ್ಗಿ: ಹೈದರಾಬಾದ-ಕರ್ನಾಟಕ ಭಾಗದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್‌ ಹಾಗೂ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. 

Advertisement

ತಾಲೂಕಿನ ಕೂಟನೂರ ಗ್ರಾಮದಲ್ಲಿ ಸೋಮವಾರ ಮಲ್ಲಿಕಾರ್ಜುನ ದೇವಸ್ಥಾನ ಕಟ್ಟಡದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಧರಂ-ಖರ್ಗೆ ಕಳೆದ 4 ದಶಕಗಳಿಂದ ಈ ಭಾಗದ ಸಮಗ್ರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. 

ಸಂವಿಧಾನದ 371ನೇ (ಜೆ) ಕಲಂ ಜಾರಿಗೆ ಅವಿರತ ಹೋರಾಟ ನಡೆಸಿದ ಪರಿಣಾಮ ಈ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ನಿರೋದ್ಯೋಗಿಗಳಿಗೆ ಸಾಕಷ್ಟು ಪ್ರಯೋಜನವಾಗಿದೆ ಎಂದು ಹೇಳಿದರು.

ಸಾರ್ವಜನಿಕರ ಹಿತಕಾಪಾಡುವುದರ ಜತೆ ಜತೆಗೆ ಕಾಳಜಿಯಿಂದ ಕೆಲಸ ಮಾಡುತ್ತಿರುವ ಶಾಸಕ ಡಾ| ಅಜಯಸಿಂಗ್‌ ತಾಲೂಕಿನ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಹೇಳಿದರು. ಶಾಸಕ ಡಾ| ಅಜಯಸಿಂಗ್‌ ಮಾತನಾಡಿ, 

ಕೂಟನೂರ ಗ್ರಾಮದಲ್ಲಿ ಎಚ್‌ಕೆಆರ್‌ಡಿಬಿ ವತಿಯಿಂದ 40 ಲಕ್ಷ ರೂ. ವೆಚ್ಚದ ರಸ್ತೆ, 50 ಲಕ್ಷ ವೆಚ್ಚದ ಅಂಬೇಡ್ಕರ್‌ ಭವನ ಸೇರಿದಂತೆ ಒಟ್ಟು 6 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. 

Advertisement

ದೇವಸ್ಥಾನ ಸಮಿತಿಯ ಬೈಲಪ್ಪ ನೆಲೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟರು. ಆಲೂರಿನ ಕೆಂಚವೃಷಭೇಂದ್ರ ಶಿವಾಚಾರ್ಯರು ಮೂರ್ತಿ ಪ್ರತಿಷ್ಠಾಪನೆ ನೆರವೇರಿಸಿದರು. 

ಗ್ರಾಪಂ ಅಧ್ಯಕ್ಷೆ ಗಂಗುಬಾಯಿ ಬಸವರಾಜ ಬಿರಾದಾರ, ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ, ಮುಖಂಡರಾದ ಸುಭಾಷ ಜಾಧವ, ಚಂದ್ರಶೇಖರ ಹರನಾಳ, ಮಲ್ಲಿಕರ್ಜುನ ಪಾಟೀಲ, ಬಾಳಾಸಾಬ ಪಾಟೀಲ, ರಾಜಶೇಖರ ಖಣದಾಳ, ಭಾಗವಹಿಸಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next