Advertisement
ನ.26 (ಇಂದಿನಿಂದ) ನ.30ರ ವರೆಗೆ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ನಾಡಿನಾದ್ಯಂತ ಲಕ್ಷೋಪಮಂದಿ ಸೇರುತ್ತಾರೆ. ವರ್ಷದಲ್ಲಿ ಒಂದು ಬಾರಿ ದೇವರು ಗರ್ಭಗುಡಿಯಿಂದ ಹೊರಬಂದು ವಿವಿಧ ಉತ್ಸವದ ಮೂಲಕ ನಾಡಿನ ಭಕ್ತರಿಗೆ ದರ್ಶನ ನೀಡುತ್ತಾರೆ. ಉಳಿದ ಸಮಯದಲ್ಲಿ ಭಕ್ತರ ಮನೋರಂಜನೆಗಾಗಿ ಸಾಂಸ್ಕೃತಿಕ ಸಹಿತ ವಿವಿಧ ಪ್ರಕಾರದ ಸ್ಟಾಲ್‌ಗಳು, ಕೊನೆಗೆ ಸರ್ವಧರ್ಮ ಸಮ್ಮೇಳನದ ಮೂಲಕ ಜ್ಞಾನವ ಉಣಬಡಿಸುತ್ತಾ ಬಂದಿದೆ.
ಧರ್ಮಸ್ಥಳದಲ್ಲಿ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.
Related Articles
ಇಂದು ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಪ್ರಾರಂಭಗೊಳ್ಳುತ್ತವೆ. ಮಂಗಳವಾರ ಅಪರಾಹ್ನ ಮೂರು ಗಂಟೆಗೆ 25 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಉಜಿರೆಯಿಂದ ಹೊರಟು ಧರ್ಮಸ್ಥಳಕ್ಕೆ ಭಜನೆ, ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಬರುತ್ತಾರೆ. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಕೂಡಾ ಪಾದಯಾತ್ರೆಯಲ್ಲಿ ಭಾಗವಹಿಸುವರು. ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಸಂದೇಶ ನೀಡುವರು.
Advertisement
ಇಂದಿನಿಂದ ವಸ್ತು ಪ್ರದರ್ಶನನ.26 ರಿಂದ 30ರ ವರೆಗೆ ಪ್ರೌಢಶಾಲಾ ಆವರಣದಲ್ಲಿ ಮುನ್ನೂರಕ್ಕೂ ಮಿಕ್ಕಿ ಮಳಿಗೆಗಳಿರುವ ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನ ಆಯೋಜಿಸಿದ್ದು, ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರತೀ ವರ್ಷದಂತೆ ಲಕ್ಷದೀಪೋತ್ಸವದ ದಿನ ಶನಿವಾರ ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಧರ್ಮಸ್ಥಳಕ್ಕೆ ಬರುತ್ತಾರೆ. ಕೆ.ಎಸ್.ಆರ್.ಟಿ.ಸಿ. ನಾಡಿನ ವಿವಿಧ ಊರುಗಳಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಹಲವು ಮಂದಿ ಭಕ್ತರು ಪಾದಯಾತ್ರೆಯಲ್ಲಿ ಬರುತ್ತಾರೆ. ಕೊನೆ ದಿನ ಭಕ್ತರಿಂದ ಲಕ್ಷಕ್ಕೂ ಅಧಿಕ ಮಂದಿಗೆ ಉಚಿತ ವಿವಿಧ ಭಗೆಯ ಭೋಜನ ವ್ಯವಸ್ಥೆಯು ಅನ್ನಪೂರ್ಣ ಛತ್ರದ ಹಿಂಭಾಗ ನಡೆಯುವುದು ವಿಶೇಷವಾಗಿದೆ. ಪ್ರತಿದಿನ ಉತ್ಸವ
ಮಂಗಳವಾರ ರಾತ್ರಿ ಹೊಸಕಟ್ಟೆ ಉತ್ಸವ, ಬುಧವಾರ ರಾತ್ರಿ ಕೆರೆಕಟ್ಟೆ ಉತ್ಸವ, ಗುರುವಾರ ರಾತ್ರಿ ಕಂಚಿಮಾರುಕಟ್ಟೆ ಉತ್ಸವ ಮತ್ತು ಶನಿವಾರ ರಾತ್ರಿ ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ) ನಡೆಯುತ್ತದೆ.