Advertisement

ಧರಂಸಿಂಗ್‌ ನಿಧನದಿಂದ ಹೈಕ ಭಾಗಕ್ಕೆ ನಷ್ಟ

12:16 PM Jul 29, 2017 | Team Udayavani |

ಮೈಸೂರು: ಹೈದ್ರಾಬಾದ್‌-ಕರ್ನಾಟಕ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದ ಮಾಜಿ ಸಿಎಂ ಧರಂಸಿಂಗ್‌ ಅವರ ನಿಧನದಿಂದ ಹೈದ್ರಾಬಾದ್‌ ಕರ್ನಾಟಕದ ಧ್ವನಿಯೊಂದು ಮರೆಯಾದಂತಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ವಿಷ್ಣುನಾಥ್‌ ಬೇಸರ ವ್ಯಕ್ತಪಡಿಸಿದರು.

Advertisement

ನಗರ ಕಾಂಗ್ರೆಸ್‌ ಸಮಿತಿವತಿಯಿಂದ ನಗರದ ಪುರಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಧರಂಸಿಂಗ್‌ರದು ಅಳಿಸಲಾಗದ ಇತಿಹಾಸ, ವಿವಿಧ ಇಲಾಖೆಯ ಸಚಿವರಾಗಿ, ಮುಖ್ಯಮಂತ್ರಿಯಾಗಿ ಅವರು ರೂಪಿಸಿದ ಕಾರ್ಯಕ್ರಮಗಳು ಇಂದಿಗೂ ಎಲ್ಲರಿಗೂ ಮಾದರಿಯಾಗಿದೆ. ಹೆಚ್ಚಾಗಿ ಹಿಂದುಳಿದ ಪ್ರದೇಶವಾದ ಹೈದ್ರಾಬಾದ್‌ ಕರ್ನಾಟಕಕ್ಕೆ ಪ್ರಮುಖ ಆದ್ಯತೆ ನೀಡಿದ್ದರು, ಆದರೆ ಅವರ ನಿಧನದಿಂದ ಹೈದ್ರಾಬಾದ್‌ ಕರ್ನಾಟಕದ ಧ್ವನಿಯೊಂದು ಮರೆಯದಾಂತಾಗಿದೆ ಎಂದು ಹೇಳಿದರು.

ಧರಂಸಿಂಗ್‌ ಅವರ ಪಕ್ಷ ನಿಷ್ಠೆ ಪ್ರತಿಯೊಬ್ಬ ಕಾಂಗ್ರೆಸ್‌ ಕಾರ್ಯಕರ್ತನಿಗೆ ಮಾದರಿಯಾಗಬೇಕು, ಪಕ್ಷ ನೀಡಿದ ಜವಾಬ್ದಾರಿಯನ್ನು ಉತ್ತಮವಾಗಿ ನಿಭಾಯಿಸುತ್ತಿದ್ದ ಅವರು, ಚುನಾವಣೆಯಲ್ಲಿ ಗೆದ್ದರು ಪಕ್ಷ ರಾಜೀನಾಮೆ ನೀಡಬೇಕೆಂದು ಸೂಚಿಸಿದ ಕೂಡಲೇ ರಾಜೀನಾಮೆ ನೀಡುವ ಮೂಲಕ ಪಕ್ಷ ನಿಷ್ಠೆ ತೋರಿಸಿ ದ್ದರು. ಹೀಗಾಗಿ ಎಲ್ಲಾ ಕಾರ್ಯಕರ್ತರು ಈ ರೀತಿ ಪಕ್ಷ ನಿಷ್ಠೆ ಬೆಳೆಸಿಕೊಳ್ಳಬೇಕು ಎಂದರು.

ಶಾಸಕ ಎಂ.ಕೆ.ಸೋಮಶೇಖರ್‌, ಮಾಜಿ ಶಾಸಕಿ ಮುಕ್ತಾರ್‌ ಉನ್ನಿಸ್ಸಾಬೇಗಂ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ನಗರಾಧ್ಯಕ್ಷ ಆರ್‌.ಮೂರ್ತಿ ಇನ್ನಿತರು ಮಾತನಾಡಿ ಧರಂಸಿಂಗ್‌ ಅವರ ನಿಧನಕ್ಕೆ ಸಂತಾಪ ಸೂಚಿಸಿದರು. ಮೈಲಾಕ್‌ ಅಧ್ಯಕ್ಷ ಎಚ್‌.ಎ.ವೆಂಕಟೇಶ್‌, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಸಿದ್ದರಾಜು, ರೆಹಾನ ಬಾನು, ಜಿಪಂ ಮಾಜಿ ಅಧ್ಯಕ್ಷೆ ಪುಷ್ಪಾ ಅಮರನಾಥ್‌, ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಅಜಯ್‌ ರಾವ್‌, ಪಾಲಿಕೆ ಸದಸ್ಯರಾದ ಪ್ರಶಾಂತ್‌ ಗೌಡ, ರಘುರಾಜೇ ಅರಸ್‌, ಜಗದೀಶ್‌ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next