Advertisement

ಧರಣಿ ಮಂಡಲ ಥಿಯೇಟರ್‌ನಲ್ಲಿ ದರ್ಶನ

01:38 PM Nov 02, 2022 | Team Udayavani |

“ಗುಳ್ಟು’ ಖ್ಯಾತಿಯ ನವೀನ್‌ ಶಂಕರ್‌, ಐಶಾನಿ ಶೆಟ್ಟಿ ಜೋಡಿಯಾಗಿ ಅಭಿನಯಿಸಿರುವ ಕ್ರೈಂ-ಥ್ರಿಲ್ಲರ್‌ ಕಥಾಹಂದರದ “ಧರಣಿ ಮಂಡಲ ಮಧ್ಯದೊಳಗೆ’ ಚಿತ್ರ ತೆರೆಗೆ ಬರಲು ತಯಾರಾಗಿದೆ.

Advertisement

ಸದ್ಯ ಭರದಿಂದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ನವೆಂಬರ್‌ 25ಕ್ಕೆ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾವನ್ನು ಥಿಯೇಟರ್‌ಗೆ ತರುವ ಯೋಜನೆ ಹಾಕಿಕೊಂಡಿದೆ. “ಬಾಕ್ಸ್‌ ಆಫೀಸ್‌ ಸಿನಿ ಕ್ರಿಯೇಷನ್ಸ್‌’ ಬ್ಯಾನರ್‌ನಡಿ ಓಂಕಾರ್‌ ನಿರ್ಮಿಸಿರುವ ಈ ಚಿತ್ರಕ್ಕೆ ವೀರೇಂದ್ರ ಕಂಚನ್‌, ಗೌತಮಿ ರೆಡ್ಡಿ ಸಹ ನಿರ್ಮಾಣವಿದೆ. ಪೂರಿ ಜಗನ್ನಾಥ್‌ ಮೊದಲಾದ ನಿರ್ದೇಶಕರ ಜೊತೆ ಕೆಲಸ ಮಾಡಿದ ಅನುಭವವಿರುವ ಶ್ರೀಧರ್‌ ಶಿಕಾರಿಪುರ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

“ವ್ಯಕ್ತಿ, ವ್ಯಕ್ತಿತ್ವ, ಸಂಬಂಧ ಮತ್ತು ಸಂದರ್ಭಗಳ ಮಧ್ಯೆ ನಡೆಯುವ ಸಂಘರ್ಷದ ಸುತ್ತ “ಧರಣಿ ಮಂಡಲ ಮಧ್ಯದೊಳಗೆ’ ಚಿತ್ರದ ಕಥೆ ಸಾಗುತ್ತದೆ. ಕ್ರೈಂ-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿರುವ ಈ ಸಿನಿಮಾದಲ್ಲಿ ಲವ್‌, ಸೆಂಟಿಮೆಂಟ್‌, ಕಾಮಿಡಿ ಹೀಗೆ ಎಲ್ಲ ಥರದ ಮನೋರಂಜನೆಯ ಅಂಶಗಳೂ ಇದೆ’ ಎಂಬುದು ಚಿತ್ರತಂಡದ ಮಾತು.

ಇನ್ನು “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದಲ್ಲಿ ನವೀನ್‌ ಶಂಕರ್‌, ಐಶಾನಿ ಶೆಟ್ಟಿ ಅವರೊಂದಿಗೆ ಯಶ್‌ ಶೆಟ್ಟಿ, ಸಿದ್ದು ಮೂಲಿಮನಿ, ಪ್ರಕಾಶ್‌ ತುಮ್ಮಿನಾಡು, ಓಂಕಾರ್‌, ನಿತೇಶ್‌ ಮಹಾನ್‌, ಜಯಶ್ರೀ ಆರಾಧ್ಯ, ಶಾಂಭವಿ ಮೊದಲಾದವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಕೀರ್ತನ್‌ ಪೂಜಾರಿ ಛಾಯಾಗ್ರಹಣ, ಉಜ್ವಲ್‌ ಚಂದ್ರ ಸಂಕಲನವಿದೆ. ಚಿತ್ರದ ಐದು ಹಾಡುಗಳಿಗೆ ರೋಣದ ಬಕ್ಕೇಶ್‌ ಮತ್ತು ಕಾರ್ತಿಕ್‌ ಚೆನ್ನೋಜಿರಾವ್‌ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ಧರಣಿ ಮಂಡಲ ಮಧ್ಯದೊಳಗೆ’ ಸಿನಿಮಾದ ಟೈಟಲ್‌ ಪೋಸ್ಟರ್‌, ಟೀಸರ್‌ ಮತ್ತು ಎರಡು ಹಾಡುಗಳು ನಿಧಾನವಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

Advertisement

ಇನ್ನು ಸಿನಿಮಾ ಥಿಯೇಟರ್‌ನಲ್ಲಿ ಹೇಗಿರಲಿದೆ ಎಂಬ ಕುತೂಹಲಕ್ಕೆ ನ. 25ಕ್ಕೆ ಉತ್ತರ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next