ಕಾರ್ಕಳ: ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನೇತಾರರಾದ ಧರಂಸಿಂಗ್ ನಿಧನರಾದ ಗೌರವಾರ್ಥವಾಗಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಂತಾಪ ಸಭೆಯನ್ನು ಶುಕ್ರವಾರ ನಡೆಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಎನ್. ಕೋಟ್ಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಮಾತನಾಡಿ, ಅತ್ಯಂತ ಪ್ರಭಾವಿ ಹಿರಿಯ ಕಾಂಗ್ರೆಸ್ ನಾಯಕರಾದ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅಗಲಿದ ಸುದ್ದಿ ತೀವ್ರ ಆಘಾತ ತಂದಿದೆ.
ಅವರು ಕರ್ನಾಟಕದ ಪ್ರಭಾವಿ ನಾಯಕರಾಗಿ ಐದು ದಶಕದ ರಾಜಕೀಯ ಜೀವನದಲ್ಲಿ ಅಜಾತ ಶತ್ರುವಾಗಿದ್ದರು. ಸರಳ ಸಜ್ಜನ ರಾಜಕಾರಣಿ ಯಾಗಿದ್ದು, ತಮ್ಮ ಶಾಸಕತ್ವದ ಅವಧಿಯಲ್ಲಿ ಲೋಕೋಪಯೋಗಿ ಸಚಿವರಾದ ಅವರು ಕಾರ್ಕಳದ ಬೆ„ಪಾಸ್ ರಸ್ತೆ ಅಭಿವೃದ್ಧಿಗೆ ಸಹಕರಿಸಿ, ಮಾಜಿ ಮುಖ್ಯಮಂತ್ರಿ ಡಾ| ಎಂ.ವೀರಪ್ಪ ಮೊಲಿ ಅವರ ಉಪಸ್ಥಿತಿಯಲ್ಲಿ ಕಾರ್ಕಳ ಬೆ„ಪಾಸ್ ರಸ್ತೆಯನ್ನು ಉದ್ಘಾಟಿಸಿರುವುದು ಅವರು ಕಾರ್ಕಳ ಜನತೆಗೆ ನೀಡಿದ ಬಹುದೊಡ್ಡ ಕೊಡುಗೆಯಾಗಿದೆ.ಅತ್ಯಂತ ಕಡಿಮೆ ಸಂಖ್ಯೆಯ ಸಮುದಾಯದವ ರಾದ ಅವರು 9 ಬಾರಿ ಶಾಸಕರಾಗಿ ಎಲ್ಲ ಜಾತಿ ಧರ್ಮದವರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿ ರಾಜ್ಯದ ಜನರ ಮನಸ್ಸನ್ನು ಗೆದ್ದು, ರಾಜ್ಯದ ಮುಖ್ಯಮಂತ್ರಿಯಾಗಿ, ಸಂಸದರಾಗಿ ಹಾಗೂ ಅನೇಕ ಖಾತೆಗಳನ್ನು ನಿರ್ವಹಿಸಿದ ಇವರ ಸಾಧನೆ ಎಲ್ಲರಿಗೂ ಮಾದರಿಯಾಗಲಿ ಎಂದರು.
ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಸುಬಿತ್ ಕುಮಾರ್, ಹಿಂದುಳಿದ ವರ್ಗದ ಅಧ್ಯಕ್ಷ ನವೀನ್ ದೇವಾಡಿಗ, ಕಿಸಾನ್ ಘಟಕ ಅಧ್ಯಕ್ಷ ದಯಾನಂದ ಶೆಟ್ಟಿ, ಅಲ್ಪಸಂಖ್ಯಾಕ ಘಟಕ ಅಧ್ಯಕ್ಷ ಅಸ್ಲಂ, ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಮಾಳ ಗ್ರಾ.ಪಂ. ಸದಸ್ಯ ಅನಿಲ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಳಿನಿ ಆಚಾರ್ಯ, ಸದಾಶಿವ ದೇವಾಡಿಗ, ಪುರಸಭಾ ಸದಸ್ಯರುಗಳಾದ ಸುನಿಲ್ ಕೋಟ್ಯಾನ್, ಪ್ರತಿಮಾ, ಮಾಜಿ ತಾ.ಪಂ.ಸ ಸುಜಿತ್ ಶೆಟ್ಟಿ, ಶೋಭ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಪ್ರಭಾಕರ ಬಂಗೇರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.