ಧಾರವಾಡ: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಘಟನೆಗೆ ಸಂಬಂಧಿಸಿದಂತೆ ಐವರನ್ನು ಶಹರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
17 ರ ಹರೆಯದ ಬಾಲಕಿ ಮೇಲೆ ಐವರು ಅಪ್ರಾಪ್ತ ವಯಸ್ಕರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಘಟನೆಗೆ ತಡವಾಗಿ ಬೆಳಕಿಗೆ ಬಂದಿದೆ. ಈ ವಿಷಯ ತಿಳಿದ ಪೋಷಕರು, ಶಹರ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು, ಐವರನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ
ತನಿಖೆ ಮುಂದುವರೆಸಲಾಗಿದೆ.
ಪೊಲೀಸರ ಪ್ರಕಾರ, ಸಂತ್ರಸ್ತೆ ಆರೋಪಿಗಳಲ್ಲಿ ಒಬ್ಬನನ್ನು ಪ್ರೀತಿಸುತ್ತಿದ್ದಳು. ಅವಳು ಆತನೊಂದಿಗೆ ಖಾಸಗಿ ಕ್ಷಣದಲ್ಲಿದ್ದಾಗ, ಇತರ ಹುಡುಗರು ವಿಡಿಯೋವನ್ನು ರೆಕಾರ್ಡ್ ಮಾಡಿ ನಂತರ, ವೈರಲ್ ಮಾಡುವುದಾಗಿ ಹುಡುಗಿಗೆ ಬ್ಲ್ಯಾಕ್‌ಮೇಲ್ ಮಾಡಿ ನಿರಂತರವಾಗಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಮತ್ತು ಅವರ ಸಂಪರ್ಕದಲ್ಲಿ ವೈರಲ್ ಆಗಿರುವ ವೀಡಿಯೊವನ್ನು ಸಹ ಹಂಚಿಕೊಂಡಿದ್ದಾರೆ.
ನೆರೆಹೊರೆಯ ಹುಡುಗನನ್ನು ಪ್ರೀತಿಸುತ್ತಿದ್ದೆ ಅವನು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಎಂದು ಸಂತ್ರಸ್ತೆ ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ತನ್ನ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಬಹುದೆಂಬ ಭಯದಿಂದ ಅಪ್ರಾಪ್ತರ ಗುಂಪಿನಿಂದ ತನಗಾದ ದೌರ್ಜನ್ಯ, ಬ್ಲಾಕ್‌ಮೇಲಿಂಗ್ ಮತ್ತು ಲೈಂಗಿಕ ದೌರ್ಜನ್ಯದ ಬಗ್ಗೆ ಬಾಲಕಿ ಬಹಿರಂಗಪಡಿಸಲಿಲ್ಲ.