Advertisement
ನಗರದ ಡಿಸಿ ಕಚೇರಿ ನೂತನ ಸಭಾಂಗಣದಲ್ಲಿ ಕೋವಿಡ್ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ನ ರೂಪಾಂತರಗೊಂಡ ವೈರಾಣು ಹರಡುವಿಕೆಯಲ್ಲಿ ಕ್ರಮೇಣವಾಗಿ ಹೆಚ್ಚಳ ಕಂಡು ಬರುತ್ತಿದೆ. ಜಿಲ್ಲೆಯ ಸರ್ಕಾರಿ-ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎಲ್ಲ ತಾಲೂಕು ಆಸ್ಪತ್ರೆಗಳನ್ನು ಸಿದ್ಧ ಮಾಡಿಕೊಳ್ಳಬೇಕು. ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲು ಸ್ಥಳ ಗುರುತಿಸಬೇಕು. ತುರ್ತು ಚಿಕಿತ್ಸಾವಾಹನ, ಔಷಧ ಮತ್ತಿತರೆ ಉಪಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸಹಕಾರ ನೀಡಲಿದ್ದು, ಆಯುಷ್ ವೈದ್ಯರನ್ನು ಸೇವೆಗೆ ಬಳಸಿಕೊಳ್ಳಲಾಗುವುದು ಎಂದರು.
Related Articles
Advertisement
ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಡಿಸಿಪಿ ಸಾಹಿಲ್ ಬಾಗ್ಲಾ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಭಜಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ|ಯಶವಂತ ಮದೀನಕರ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ|ಅರುಣ ಕುಮಾರ ಚವ್ಹಾಣ, ಡಾ|ರಾಜಶೇಖರ ದ್ಯಾಬೇರಿ, ಡಾ|ಲಕ್ಷ್ಮೀಕಾಂತ ಲೋಕರೆ, ಡಾ|ಎಸ್.ಎಂ.ಹೊನಕೇರಿ, ಡಾ|ಎಸ್.ಎಂ.ನಿಂಬಣ್ಣವರ, ಡಾ|ಸುಜಾತಾಹಸವಿಮಠ, ಡಾ|ಶಶಿ ಪಾಟೀಲ, ಡಾ|ತನುಜಾ ನಾಯ್ಕ, ಡಾ|ಸಂಪತ್ ಸಿಂಗ್ ಇದ್ದರು. ಕೋವಿಡ್ ನಿಯಮ ಉಲ್ಲಂಘನೆ; 13,500 ದಂಡ ವಸೂಲಿ
ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ಕೋವಿಡ್ -19ರ ನಿಯಮಗಳನ್ನು ಉಲ್ಲಂಘಿಸಿದ ಒಟ್ಟು 56 ಜನರಿಗೆ 13,500 ರೂ. ದಂಡ ವಿಧಿಸಲಾಗಿದೆ. ಪಾಲಿಕೆಯಿಂದ ಇದುವರೆಗೆ ಒಟ್ಟು 75,94,850 ರೂ. ದಂಡ ವಿಧಿಸಿದಂತಾಗಿದೆ. ಪಾಲಿಕೆಯ ವಲಯಗಳ ವ್ಯಾಪ್ತಿಯಲ್ಲಿ ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರು ಮಾಸ್ಕ್
ಧರಿಸದೆ ತಿರುಗಾಡುತ್ತಿದ್ದ 46 ಜನರಿಗೆ 11,500ರೂ. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ 10 ಜನರಿಗೆ 2 ಸಾವಿರ ರೂ. ದಂಡ ವಿಧಿಸಿದ್ದಾರೆಂದು ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ. 144 ಜನರಲ್ಲಿ ಕೋವಿಡ್ ಸೋಂಕು ಪತ್ತೆ
ಧಾರವಾಡ: ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಬರೋಬ್ಬರಿ 144 ಜನರಲ್ಲಿ ಸೋಂಕು ಪತ್ತೆ ಆಗುವ ಮೂಲಕ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 62,076 ಕ್ಕೆ ಏರಿದೆ. ಇನ್ನು 41 ಜನ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 60,317ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 432ಕ್ಕೆ ಏರಿದ್ದು, ಈ ಪೈಕಿ ನಾಲ್ವರು ಸೋಂಕಿತರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಸೋಂಕಿತರ ಸಾವಿನ ಸಂಖ್ಯೆ 1325ಕ್ಕೆ ನಿಂತಿದೆ.