Advertisement
ಜ.12ರಂದು ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವುದನ್ನು ಹಿಂಪಡೆಯಲಾಗಿದೆ. ಜ.24ರಿಂದ ಶಾಲೆಗಳನ್ನು ಪುನರ್ ಆರಂಭಿಸಲು ಆದೇಶಿಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ.
Related Articles
Advertisement
– ರಜೆ ಘೋಷಿಸಿದ ಅವಧಿಯಲ್ಲಿ ಶಾಲೆ-ಕಾಲೇಜು ಆವರಣವನ್ನು ಸ್ಯಾನಿಟೈಸ್ ಮಾಡಬೇಕು.
– ಸೋಂಕಿತ ವಿದ್ಯಾರ್ಥಿಗಳ ಆರೋಗ್ಯದ ಸ್ಥಿತಿಗತಿ ದಿನಂಪ್ರತಿ ವಿಚಾರಿಸುವುದು ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು.
– ವಿದ್ಯಾರ್ಥಿಗಳಿಗೆ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ತಿಳಿವಳಿಕೆ ನೀಡುವುದು.
– ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ವಿದ್ಯಾರ್ಥಿಗಳಿಗೆ ಲಸಿಕಾಕರಣ ಕುರಿತು ಕ್ರಮ ಕೈಕೊಳ್ಳುವುದು.
– ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಸೋಂಕಿತ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವ ತಪಾಸಣೆ ಕುರಿತು ಆರೋಗ್ಯ ಇಲಾಖೆಸಹಯೋಗದೊಂದಿಗೆ ಸೂಕ್ತ ಕ್ರಮ ವಹಿಸುವುದು. – ರಜೆ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಕಂಡುಬರುವ ಪಾಸಿಟಿವ್ ಪ್ರಕರಣಗಳ ಮಾಹಿತಿ ಪಡೆದು ರಜೆ ಮುಂದುವರಿಸುವ ಬಗ್ಗೆ ಅಥವಾ ಶಾಲೆ ಪುನರ್ ಆರಂಭಿಸುವ ಬಗ್ಗೆ ನೋಡಲ್
ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. – ಆರೋಗ್ಯ ಇಲಾಖೆ ಎಲ್ಲ ಅಧಿಕಾರಿಗಳು ನೋಡೆಲ್ ಅಧಿಕಾರಿಗಳಿಗೆ ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡಬೇಕು.