Advertisement

ನಾಳೆಯಿಂದ ಶಾಲೆ ಪುನಾರಂಭ ; ಪರಿಷ್ಕೃತ ಆದೇಶ ಹೊರಡಿಸಿದ ಧಾರವಾಡ ಜಿಲ್ಲಾಧಿಕಾರಿ

02:38 PM Jan 23, 2022 | Team Udayavani |

ಧಾರವಾಡ: ಧಾರವಾಡ ನಗರ, ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ, ಗ್ರಾಮೀಣ ತಾಲೂಕಿನಾದ್ಯಂತ ಶಾಲೆಗಳಲ್ಲಿ 1ರಿಂದ 8ನೇ ತರಗತಿಗಳನ್ನು ಜ.24ರಿಂದ ಪುನರ್‌ ಆರಂಭಿಸಲು ಡಿಸಿ ನಿತೇಶ ಪಾಟೀಲ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ 3ರಿಂದ 5 ಪಾಸಿಟಿವ್‌ ಪ್ರಕರಣಗಳು ಬಂದರೆ ಮೂರು ದಿನ, 6ರಿಂದ 20 ಪಾಸಿಟಿವ್‌ ಪ್ರಕರಣಗಳು ಬಂದರೆ ಐದು ದಿನ, 20ಕ್ಕಿಂತ ಹೆಚ್ಚು ಪ್ರಕರಣಗಳು ಬಂದರೆ ಏಳು ದಿನ, ಹೀಗೆ ಪ್ರಕರಣಗಳು ದಾಖಲಾದರೆ ಶಾಲೆ-ಕಾಲೇಜನ್ನು ತಕ್ಷಣ ಕ್ಲಸ್ಟರ್‌ ಎಂಬುದಾಗಿ ಪರಿಗಣಿಸಿ ಸಾರ್ವತ್ರಿಕ ರಜೆ ಎಂದು ಘೋಷಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಸಂಬಂಧಿಸಿದ ಶಿಕ್ಷಣ ಸಂಸ್ಥೆ ಮುಖ್ಯಸ್ಥರು, ಪ್ರಾಂಶುಪಾಲರಿಗೆ ಸೂಚಿಸಿದ್ದಾರೆ.

Advertisement

ಜ.12ರಂದು ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವುದನ್ನು ಹಿಂಪಡೆಯಲಾಗಿದೆ. ಜ.24ರಿಂದ ಶಾಲೆಗಳನ್ನು ಪುನರ್‌ ಆರಂಭಿಸಲು ಆದೇಶಿಸಲಾಗಿದೆ ಎಂದು ಡಿಸಿ ನಿತೇಶ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ : ಶೃಂಗೇರಿ ಮಠದ ಆವರಣದಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

ಶಾಲಾ-ಕಾಲೇಜುಗಳ ಮುಖ್ಯಸ್ಥರು ಪಾಲಿಸಬೇಕಾದ ನಿಯಮಗಳು :

– ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸುವ ಕುರಿತು ಮತ್ತು ಪುನರ್‌ ಆರಂಭಿಸುವ ಕುರಿತು ನಿಯಮಿತವಾಗಿ ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕು.

Advertisement

– ರಜೆ ಘೋಷಿಸಿದ ಅವಧಿಯಲ್ಲಿ ಶಾಲೆ-ಕಾಲೇಜು ಆವರಣವನ್ನು ಸ್ಯಾನಿಟೈಸ್‌ ಮಾಡಬೇಕು.

– ಸೋಂಕಿತ ವಿದ್ಯಾರ್ಥಿಗಳ ಆರೋಗ್ಯದ ಸ್ಥಿತಿಗತಿ ದಿನಂಪ್ರತಿ ವಿಚಾರಿಸುವುದು ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವುದು.

– ವಿದ್ಯಾರ್ಥಿಗಳಿಗೆ ಕೋವಿಡ್‌-19 ಮುನ್ನೆಚ್ಚರಿಕಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಕುರಿತು ತಿಳಿವಳಿಕೆ ನೀಡುವುದು.

– ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ವಿದ್ಯಾರ್ಥಿಗಳಿಗೆ ಲಸಿಕಾಕರಣ ಕುರಿತು ಕ್ರಮ ಕೈಕೊಳ್ಳುವುದು.

– ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ವಯ ಸೋಂಕಿತ ವಿದ್ಯಾರ್ಥಿಗಳ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿತರ ಗಂಟಲು ದ್ರವ ತಪಾಸಣೆ ಕುರಿತು ಆರೋಗ್ಯ ಇಲಾಖೆ
ಸಹಯೋಗದೊಂದಿಗೆ ಸೂಕ್ತ ಕ್ರಮ ವಹಿಸುವುದು.

– ರಜೆ ಅವಧಿಯಲ್ಲಿ ವಿದ್ಯಾರ್ಥಿಗಳಲ್ಲಿ ಕಂಡುಬರುವ ಪಾಸಿಟಿವ್‌ ಪ್ರಕರಣಗಳ ಮಾಹಿತಿ ಪಡೆದು ರಜೆ ಮುಂದುವರಿಸುವ ಬಗ್ಗೆ ಅಥವಾ ಶಾಲೆ ಪುನರ್‌ ಆರಂಭಿಸುವ ಬಗ್ಗೆ ನೋಡಲ್‌
ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.

– ಆರೋಗ್ಯ ಇಲಾಖೆ ಎಲ್ಲ ಅಧಿಕಾರಿಗಳು ನೋಡೆಲ್‌ ಅಧಿಕಾರಿಗಳಿಗೆ ಈ ವಿಷಯದಲ್ಲಿ ಸಂಪೂರ್ಣ ಸಹಕಾರ ನೀಡಬೇಕು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next