Advertisement

ಡಾ|ಬಿ.ಆರ್‌.ಅಂಬೇಡ್ಕರ್‌ ಜಯಂತಿ ಜಿಲ್ಲಾದ್ಯಂತ ಸರಳ ಆಚರಣೆ

03:20 PM Apr 16, 2020 | Naveen |

ಧಾರವಾಡ: ಕೋವೀಡ್‌-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ|ಬಿ. ಆರ್‌.ಅಂಬೇಡ್ಕರ್‌ ಅವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಪ್ರಸಾದ ಅಬ್ಬಯ್ಯ, ಸಿ.ಎಂ.ನಿಂಬಣ್ಣವರ, ಅರವಿಂದ ಬೆಲ್ಲದ, ಪ್ರದೀಪ ಶೆಟ್ಟರ, ಎಸ್‌ಪಿ ವರ್ತಿಕಾ ಕಟಿಯಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾ ಧಿಕಾರಿ ಶಿವಾನಂದ ಕರಾಳೆ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಎನ್‌.ಆರ್‌ .ಪುರುಷೋತ್ತಮ ಇದ್ದರು.

ಪುತ್ಥಳಿಗೆ ಮಾಲಾರ್ಪಣೆ: ಜುಬ್ಲಿ ವೃತ್ತದ ಡಾ|ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಮಾಲಾರ್ಪಣೆ ಮಾಡಿದರು. ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ್‌ ಇದ್ದರು. ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿಗೆ ಡಿಸಿ ದೀಪಾ ಚೋಳನ್‌ ಅವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮಾಲಾರ್ಪಣೆ ಮಾಡಿದರು.

ನಗರದ ಜ್ಯುಬ್ಲಿ ವೃತ್ತದಲ್ಲಿರುವ ಡಾ|ಬಿ.ಆರ್‌.ಅಂಬೇಡ್ಕರ್‌ ಅವರ ಪುತ್ಥಳಿ ನಂತರ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಜಿಪಂ ಸಿಇಒ ಡಾ| ಬಿ.ಸಿ ಸತೀಶ್‌, ಎಸ್‌ಪಿ ವರ್ತಿಕಾ ಕಟಿಯಾರ, ಎಸಿ ಮಹ್ಮದ್‌ ಜುಬೇರ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪುರುಷೋತ್ತಮ, ತಹಸೀಲ್ದಾರ್‌ ಸಂತೋಷ ಬಿರಾದಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next