Advertisement
ಇಲ್ಲಿನ ಕಲ್ಯಾಣ ನಗರದಲ್ಲಿರುವ ಶ್ರೀ ಸಿದ್ದರಾಮೇಶ್ವರ ಮಾರ್ಗದರ್ಶಿಯಲ್ಲಿ ಮಂಗಳವಾರ ಸುದೀರ್ಘ ಐದು ಗಂಟೆಗಳ ಸಭೆ ನಡೆಸಿದ 21 ಲಿಂಗಾಯತ ಮಠಾಧಿಶರ ಈ ನಿರ್ಣಯ ಅಂಗೀಕರಿಸಿ ಸರ್ಕಾರಕ್ಕೆ ಕಳುಹಿಸಿದ್ದಾರೆ.
Related Articles
Advertisement
ಇದನ್ನೂ ಓದಿ : ಸಿದ್ದರಾಮಯ್ಯ ,ಕಾಂಗ್ರೆಸ್ ಅಧಿಕಾರ ಕಳೆದುಕೊಂಡು ಮತಿಭ್ರಮಣೆಯಾಗಿದೆ: ನಳಿನ್ ಕುಮಾರ್ ಕಟೀಲ್
ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಚಾರದ ಮಾತನ್ನಾಡುತ್ತಿದ್ದಾರೆ. ಅವುಗಳಿಗೆ ಸರ್ಕಾರ ಗಮನ ಕೊಡದೇ ನೇರವಾಗಿ ಬಸವತತ್ವ ಮತ್ತು ವಚನ ಸಾಹಿತ್ಯವನ್ನು ಗಮನದಲ್ಲಿಟ್ಟುಕೊಂಡು ಲೋಪದೋಷಗಳನ್ನು ತಿದ್ದುಪಡಿ ಮಾಡಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸ್ವಾಮೀಜಿಗಳು ಒಕ್ಕೋರಲಿನಿಂದ ಆಗ್ರಹಿಸಿದರು.
ಹುಬ್ಬಳ್ಳಿಯ ಮೂರು ಸಾವಿರ ಮಠದ ಡಾ|ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ|ತೋಂಟದ ಸಿದ್ದರಾಮ ಸ್ವಾಮೀಜಿ, ನಿಡಸೋಸಿ ಮಠದ ಡಾ|ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಬಾಲ್ಕಿ ಹಿರೇಮಠದ ಡಾ|ಬಸವಲಿಂಗ ಪಟಾಧ್ಯಕ್ಷರು, ಬಸವಧರ್ಮ ಪೀಠದ ಗಂಗಾ ಮಾತಾಜಿ, ಮಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಮುಂಡರಗಿಯ ನಿಜಗುಣಪ್ರಭು ಸ್ವಾಮೀಜಿ, ಅಥಣಿಯ ಪ್ರಭುಚೆನ್ನಬಸವ ಸ್ವಾಮೀಜಿ, ಗೋಕಾಕ್‌ನ ಮರುಘರಾಜೇಂದ್ರಸ್ವಾಮೀಜಿ, ಹಾವೇರಿಯ ಹುಕ್ಕೆರಿಮಠದ ಸದಾಶಿವ ಸ್ವಾಮೀಜಿ, ಚೆನ್ನಮ್ಮನ ಕಿತ್ತೂರಿನ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಾಗನೂರು ರುದ್ರಾಕ್ಷಿಮಠದ ಡಾ|ಅಲ್ಲಮಪ್ರಭು ಸ್ವಾಮೀಜಿ, ಲಿಂಗಸಗೂರಿನ ಸಿದ್ದಲಿಂಗ ಸ್ವಾಮೀಜಿ, ಬಟಕುರ್ಕಿಯ ಬಸವಲಿಂಗ ಸ್ವಾಮೀಜಿ, ಬೆಂಗಳೂರು ಬಸವಧರ್ಮ ಪೀಠದ ಅಕ್ಕ ನಾಗಲಾಂಬಿಕಾ ಮಾತಾಜಿ, ಕಿತ್ತೂರಿನ ಓಂ ಗುರುಜಿ, ಹಂದಿಗುಂದಿಯ ಶಿವಾನಂದ ಮಹಾಸ್ವಾಮೀಜಿ, ಇಳಕಲ್‌ನ ಗುರುಮಹಾಂತ ಸ್ವಾಮೀಜಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಬಸವಣ್ಣನವರ ಕುರಿತು ಪಠ್ಯದೋಷವಾಗಿರುವ ಬಗ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಈ ಪತ್ರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿ ಲೋಪ ಸರಿಪಡಿಸುವ ಭರವಸೆ ನೀಡಿದ್ದಾರೆ. ಬಸವಣ್ಣನವರು ಯಾರು ಕೇಳುವವರಿಲ್ಲ ಎಂದುಕೊಂಡು ಪದೆ ಪದೇ ಟಾರ್ಗೇಟ್ ಆಗುತ್ತಿದ್ದಾರೆ. ಆದರೆ ಸ್ವಾಮೀಜಿಗಳು ಬಸವ ಪರಂಪರೆ ಮುನ್ನಡೆಸುವ ಹೊಣೆ ಹೊತ್ತಿದ್ದೇವೆ. ಇನ್ನಾದರೂ ಇದನ್ನ ಅವರು ಅರಿಯಬೇಕು.– ಡಾ|ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು, ಸಾಣೆಹಳ್ಳಿ.