Advertisement

ಧರ್ಮ ಕೀರ್ತಿರಾಜ್‌ ನಟನೆಯ ‘ಬುಲೆಟ್‌’ಚಿತ್ರದ ಮುಹೂರ್ತ

11:39 AM Nov 13, 2022 | Team Udayavani |

ಧರ್ಮ ಕೀರ್ತಿರಾಜ್‌ ನಾಯಕರಾಗಿ ನಟಿಸುತ್ತಿರುವ, ಸತ್ಯಜಿತ್‌ ನಿರ್ಮಿಸಿ, ನಿರ್ದೇಶಿಸುತ್ತಿರುವ “ಬುಲೆಟ್‌’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು.

Advertisement

ಚಿತ್ರದ ಬಗ್ಗೆ ಮಾತನಾಡುವ ಸತ್ಯಜಿತ್‌, “ಸಿನಿಮಾದ ಚಿತ್ರೀಕರಣ ಒಂದೇ ಹಂತದಲ್ಲಿ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಈ ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್‌ ನಟಿಸುತ್ತಿದ್ದಾರೆ. ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರು. ಶ್ರೀಯಾ ಅವರು ಸುಶಾಂತ್‌ ಸಿಂಗ್‌ ಅವರ ಬಯೋಪಿಕ್‌ ಚಿತ್ರದಲ್ಲಿ ನಟಿಸಿದ್ದಾರೆ. ಅಜಿತಾ ವೆಬ್‌ ಸೀರಿಸ್‌ ಗಳಲ್ಲಿ ನಟಿಸಿದ್ದಾರೆ. ಚಿತ್ರ ಕ್ರೈಮ್‌ ಥ್ರಿಲ್ಲರ್‌ ಹಾಗೂ ಫ್ಯಾಮಿಲಿ ಸೆಂಟಿಮೆಂಟ್‌ ಕಥೆ ಆಧರಿಸಿದೆ’ ಎಂದು ಮಾಹಿತಿ ನೀಡಿದರು.

“ಕಥೆ ತುಂಬಾ ಚೆನ್ನಾಗಿದೆ. ಅಪ್ಪ, ಮಗನ ಸೆಂಟಿಮೆಂಟ್‌ ಸನ್ನಿವೇಶಗಳು ಜನರಿಗೆ ಹತ್ತಿರವಾಗಲಿದೆ. ನನ್ನ ತಂದೆಯ ಪಾತ್ರದಲ್ಲಿ ಸತ್ಯಜಿತ್‌ ಅವರೆ ಅಭಿನಯಿಸುತ್ತಿದ್ದಾರೆ. ಎರಡು ಶೇಡ್‌ ಗಳಲ್ಲಿ ನನ್ನ ಪಾತ್ರವಿರುತ್ತದೆ. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ’ ಎನ್ನುವುದು ನಾಯಕ ಧರ್ಮ ಕೀರ್ತಿರಾಜ್‌ ಮಾತು.

ನಾಯಕಿಯರಾದ ಶ್ರೀಯಾ ಶುಕ್ಲ ಹಾಗೂ ಅಜಿತಾ ಜಾ ತಮ್ಮ ಪಾತ್ರ ಪರಿಚಯ ಮಾಡಿಕೊಂಡು, ಕನ್ನಡ ಚಿತ್ರದಲ್ಲಿ ಅಭಿನಯಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಚಿತ್ರಕ್ಕೆ ಪಿ.ವಿ.ಆರ್‌. ಸ್ವಾಮಿ ಛಾಯಾಗ್ರಹಣ, ರಾಜ್‌ ಭಾಸ್ಕರ್‌ ಸಂಗೀತವಿದೆ.

Advertisement

Udayavani is now on Telegram. Click here to join our channel and stay updated with the latest news.

Next