Advertisement

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

08:41 PM Mar 29, 2023 | Team Udayavani |

ಬೆಳ್ತಂಗಡಿ: ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ಮುಂಡ್ರುಪ್ಪಾಡಿ ಎಂಬಲ್ಲಿ‌ ನಡೆದಿದೆ.

Advertisement

ಕರ್ತವ್ಯ ಮುಗಿಸಿ ವಾಪಸ್ ಆಗುವ ಸಂದರ್ಭ ಮುಂಡ್ರುಪಾಡಿಯಲ್ಲಿ ಬೈಕ್ ಗೆ ಲಾರಿ ಡಿಕ್ಕಿ ಹೊಡೆದಿದ್ದು ಈ ವೇಳೆ ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ. ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಲಾಗಿದೆ. ಈ ವೇಳೆ ಬೈಕ್ ಸವಾರ ಗುರುವಾಯನಕೆರೆ ನಿವಾಸಿ ಪ್ರಸಾದ್ ಶೆಟ್ಟಿ(27) ಸಾವನ್ನಪ್ಪಿದ್ದು , ಸಹಸವಾರ ವಿಶ್ವನಾಥ್ ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ‌.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

Advertisement

Udayavani is now on Telegram. Click here to join our channel and stay updated with the latest news.

Next