Advertisement
ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ವ್ಯಸನಮುಕ್ತ ಸಾಧ ಕರ ಸಮಾವೇಶ ಮತ್ತು ಶತದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಡು ಮುಟ್ಟದ ಸೊಪ್ಪಿಲ್ಲ, ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ.ಹೆಗ್ಗಡೆ ತಲುಪದ ಸೇವಾ ಕ್ಷೇತ್ರವಿಲ್ಲ ಎಂದು ಹೇಳಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನವಜೀವನ ಸಮಿತಿ ಆಶ್ರಯದಲ್ಲಿ ವ್ಯಸನಮುಕ್ತ ಆರೋಗ್ಯ ಪೂರ್ಣ ಸಮಾಜ ರೂಪಿಸುವ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದರು.
Related Articles
-ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲ್ಯಾನ್‌ಅವರನ್ನು ಸನ್ಮಾನಿಸಲಾಯಿತು.
Advertisement
-ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಕೆ.ರೋಹಿಣಿ ಜನಜಾಗೃತಿ ವೇದಿಕೆಗೆ ಮದ್ಯವರ್ಜನ ಶಿಬಿರ ಆಯೋಜಿಸಲು 10 ಲಕ್ಷ ರೂ.ನೆರವು ನೀಡಿದರು.
-ಮದ್ಯವರ್ಜನ ಶಿಬಿರದಲ್ಲಿ ವ್ಯಸನಮುಕ್ತರಾಗಿ ನವಜೀವನ ನಡೆಸುತ್ತಿರುವ ಹುಣಸೂರಿನ ಕೃಷ್ಣೇಗೌಡ ಮತ್ತು ಮಂಡ್ಯದ ಸವಿತಾ ರುದ್ರಾಚಾರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
-ಮದ್ಯ ವ್ಯಸನಿಗಳ ಮನ ಪರಿವರ್ತನೆ ಮಾಡಿ ವ್ಯಸನಮುಕ್ತರ ನ್ನಾಗಿ ಮಾಡಿದ 10 ಮಂದಿ ಸಾಧಕರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪುರಸ್ಕಾರ ನೀಡಿ ಗೌರವಿಸಲಾಯಿತು.
-ವೇದಿಕೆಯ ಅನಂತ್ ಅವರು ಶ್ರೀ ಮಂಜುನಾಥ ಸ್ವಾಮಿ ಕುರಿತು ರಚಿಸಿದ ಭಕ್ತಿಗೀತೆಯ ದ್ವನಿಸುರುಳಿಯನ್ನು ಡಾ|ಹೆಗ್ಗಡೆ ಬಿಡುಗಡೆಗೊಳಿಸಿದರು.
-ಸಚಿವೆ ಶಶಿಕಲಾ ಜೊಲ್ಲೆ ಅನ್ನಾಸಾಹೇಬ್ ಅವರನ್ನು ಹೆಗ್ಗಡೆಯವರು ಗೌರವಿಸಿದರು.
ಶಾಲಾ-ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟ ಜಾಲ ಹೆಚ್ಚಾಗುತ್ತಿದೆ. ಇದನ್ನು ಸರ್ಕಾರ ತಡೆಗಟ್ಟಬೇಕು. ವಿದ್ಯಾರ್ಥಿಗಳು ದುಶ್ಚಟಕ್ಕೆ ಬಲಿಯಾಗದಂತೆ ತಡೆಯಲು ಶಾಲಾ-ಕಾಲೇಜುಗಳಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಮೂಲಕ ಅರಿವು ಮೂಡಿಸಲಾಗುತ್ತಿದೆ.-ಡಾ.ಡಿ.ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ ಕಿರು ಆರ್ಥಿಕ ಯೋಜನೆ ಮೂಲಕ ಸ್ವ-ಸಹಾಯ ಸಂಘಗಳ ಸಹಭಾಗಿತ್ವದಲ್ಲಿ ಮಹಿಳೆಯರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಶೇಕಡಾ ನೂರರಷ್ಟು ಸಾಲ ಮರು ಪಾವತಿಯಾಗುತ್ತಿದೆ. ಮಹಿಳೆಯರು ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ನೀಡಬೇಕು.
-ಶಶಿಕಲಾ ಜೊಲ್ಲೆ ಅನ್ನಾಸಾಹೇಬ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ