Advertisement

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

12:36 PM Nov 26, 2024 | Team Udayavani |

ಬೆಳ್ತಂಗಡಿ: ಎಂಟು ಶತಮಾನಗಳ ಭವ್ಯ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇಂದಿನಿಂದ(ನ.26) ಆರಂಭಗೊಂಡಿದ್ದು ಬೆಳಗ್ಗೆ ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು.

Advertisement

ಸತ್ಯ ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನದ ಮೂಲಕ ನಿತ್ಯೋತ್ಸವವಾಗಿರುವ ಕ್ಷೇತ್ರದಲ್ಲಿ ನ.30 ರವರೆಗೆ ದೀಪೋತ್ಸವ ಮೆರುಗು ತರಲಿದೆ.

ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಸಮ್ಮುಖದಲ್ಲಿ ಧರ್ಮಸ್ಥಳ ಪ್ರೌಢಶಾಲಾ ಆವರಣದಲ್ಲಿ 318 ಮಳಿಗೆಗಳಿಗೆ ಹೈದರಾಬಾದ್ ಯೂನಿಸೆಫ್ ಮುಖ್ಯಸ್ಥ ಡಾ.ಝೆಲಾಲೆಮ್ ಬಿರಹಾನು ಟಾಪ್ಸಿ ಇತಿಯೋಪಿಯ ಅವರು ಉದ್ಘಾಟಿಸಿದರು. ಬಳಿಕ ಮಳಿಗೆಗಳನ್ನು ವೀಕ್ಷಿಸಿದರು.

ರಾಜ್ಯಮಟ್ಟದ ಆಕರ್ಷಕ ವಸ್ತುಪ್ರದರ್ಶನದಲ್ಲಿ ಎಲ್ಲರಿಗೂ ಪ್ರವೇಶ ಉಚಿತವಾಗಿದೆ. ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Advertisement

ಇಂದು ಸಂಜೆ 3 ಗಂಟೆಗೆ ಸರಿಯಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಮುಖ್ಯಧ್ವಾರದಿಂದ ಭಕ್ತರು ಪಾದಯಾತ್ರೆ ನಡೆಯಲಿದೆ. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಆಶೀರ್ವಚನ ನೀಡುವರು.

ಧರ್ಮಸ್ಥಳದಲ್ಲಿ ಈಗಾಗಲೆ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.

ಮಂಗಳವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನೆರವೇರಲಿದೆ.

Advertisement

Udayavani is now on Telegram. Click here to join our channel and stay updated with the latest news.

Next