Advertisement
ಸತ್ಯ ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನದ ಮೂಲಕ ನಿತ್ಯೋತ್ಸವವಾಗಿರುವ ಕ್ಷೇತ್ರದಲ್ಲಿ ನ.30 ರವರೆಗೆ ದೀಪೋತ್ಸವ ಮೆರುಗು ತರಲಿದೆ.
Related Articles
Advertisement
ಇಂದು ಸಂಜೆ 3 ಗಂಟೆಗೆ ಸರಿಯಾಗಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಮುಖ್ಯಧ್ವಾರದಿಂದ ಭಕ್ತರು ಪಾದಯಾತ್ರೆ ನಡೆಯಲಿದೆ. ಶಾಸಕ ಹರೀಶ್ ಪೂಂಜ ಮತ್ತು ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಪಾದಯಾತ್ರೆಯಲ್ಲಿ ಭಾಗವಹಿಸುವರು. ಬಳಿಕ ಸಂಜೆ 7 ಗಂಟೆಗೆ ಹೆಗ್ಗಡೆಯವರು ಅಮೃತವರ್ಷಿಣಿ ಸಭಾಭವನದಲ್ಲಿ ಭಕ್ತರಿಗೆ ಆಶೀರ್ವಚನ ನೀಡುವರು.
ಧರ್ಮಸ್ಥಳದಲ್ಲಿ ಈಗಾಗಲೆ ದೇವಸ್ಥಾನ, ಬಸದಿ, ವಸತಿಛತ್ರಗಳು, ಪ್ರವೇಶದ್ವಾರ, ಉದ್ಯಾನ ಹಾಗೂ ಎಲ್ಲ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ. ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳದ ವರೆಗೆ ರಸ್ತೆಯ ಇಕ್ಕೆಲಗಳಲ್ಲಿ ಆಕರ್ಷಕ ವಿದ್ಯುದ್ದೀಪಗಳು ಹಾಗೂ ಸ್ವಾಗತ ಫಲಕಗಳನ್ನು ಹಾಕಲಾಗಿದೆ.
ಮಂಗಳವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ನೆರವೇರಲಿದೆ.