Advertisement
ಸೋಮವಾರ ಪದ್ಮಶ್ರೀ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಾವಣಗೆರೆ ತಾಲೂಕಿನ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಜನಮಂಗಳ ಕಾರ್ಯಕ್ರಮದಡಿ ಸ್ವ ಸಹಾಯ ಸಂಘಗಳ ಸದಸ್ಯರಿಗೆ ವ್ಹೀಲ್ಚೇರ್, ಶಿಷ್ಯವೇತನ, ಆಟೋರಿಕ್ಷಾ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರು ಜನರು ಸ್ವಾವಲಂಬಿ ಜೀವನ ನಡೆಸಲು ನೆರವಾಗುತ್ತಿರುವುದು ಶ್ಲಾಘನೀಯ ಎಂದರು.
Related Articles
Advertisement
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ 2,600 ಕೋಟಿಯಷ್ಟು ಸಹಾಯ ಮಾಡಲಾಗಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ಸ್ವಾವಲಂಬಿ ಉದ್ಯೋಗ ಕಂಡುಕೊಂಡು ಉತ್ತಮ ಜೀವನ ನಡೆಸುವುದಕ್ಕೆ ಸಹಕಾರಿಯಾಗುತ್ತಿರುವುದು ಬಹಳ ಸಂತೋಷದ ವಿಚಾರ ಎಂದರು.
ಉದ್ಯಮಿ ಹಂಸರಾಜ್ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದಾವಣಗೆರೆಯಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಗೆ ಸಹಾಯ ಮಾಡಲಾಗಿದೆ. ಸ್ವಸಹಾಯ ಸಂಘಗಳು ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಆಗಬೇಕು ಎಂದು ಆಶಿಸಿದರು.
ಗುರು ಮೋಟಾರ್ಸ್ ಮಾಲೀಕ ಎನ್.ಎಂ. ಗುರುಸಿದ್ದಯ್ಯ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 380 ಆಟೋರಿಕ್ಷಾ, 26 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 1,750 ಅಂಗವಿಕಲರಿಗೆ ಸಲಕರಣೆ ನೀಡಲಾಗಿದೆ ಎಂದು ತಿಳಿಸಿದರು.
ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಶ್ರೀ ದುರ್ಗಾಂಬಿಕಾ ದೇವಸ್ಥಾನ ಧರ್ಮದರ್ಶಿ ಗೌಡ್ರ ಚನ್ನಬಸಪ್ಪ, ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀನಿವಾಸ ರೆಡ್ಡಿ, ಮಲ್ಲಿಕಾರ್ಜುನ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯ ಎನ್.ಜಿ. ಚಂದ್ರಶೇಖರ್, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ಜಯಂತ್ ಪೂಜಾರಿ, ಯೋಜನಾಧಿಕಾರಿ ಸಿ.ಎಚ್.ಪದ್ಮಯ್ಯ, ಎಚ್.ಬಾಬು, ಸಿದ್ದೇಶ್, ವಿಜೇಂದ್ರ, ವಿಶಾಲ ಇತರರು ಇದ್ದರು.
34 ಜನರಿಗೆ ವ್ಹೀಲ್ಚೇರ್, 40 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, 16 ಮಂದಿಗೆ ಆಟೋರಿಕ್ಷಾ, ವಾಟರ್ ಬೆಡ್ ವಿತರಿಸಲಾಯಿತು.