Advertisement

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

01:03 AM Apr 25, 2024 | Team Udayavani |

ಬೆಳ್ತಂಗಡಿ: ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಸುಬ್ರಹ್ಮಣ್ಯಕ್ಕೆ ಹೋಗುವ ಕೆಎಸ್ಸಾರ್ಟಿಸಿ ಬಸ್‌ ಹಿಂದಕ್ಕೆ ತೆಗೆಯುವ ವೇಳೆ ಮಹಿಳೆಯೊಬ್ಬರು ಬಸ್‌ನಡಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಎ. 24ರಂದು ಮಧ್ಯಾಹ್ನ ನಡೆದಿದೆ.

Advertisement

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿರುವ ಮಹಿಳೆ ಆಕಸ್ಮಿಕವಾಗಿ ಟಯರ್‌ನಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಿಳೆಯ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಿದ್ದು, ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next