Advertisement
61.16 ಕೋಟಿ ರೂ. ಸಹಾಯಧನ30 ವರ್ಷಗಳ ಹಿಂದೆ ಜಾರಿಗೆ ತರಲಾಗಿದ್ದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮಟ್ಟ ಸುಧಾರಣೆ ಹಾಗೂ ಕಲಿಕಾ ವಾತಾವರಣ ಸುಧಾರಣೆಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಇದರಂತೆ ಶಾಲಾ ಮೂಲಭೂತ ಸೌಕರ್ಯಗಳಾದ ಶಾಲಾ ಕೊಠಡಿ, ಶೌಚಾಲಯ, ಆಟದ ಮೈದಾನ, ಶಾಲಾ ಆವರಣ, ವಿದ್ಯುದ್ಧೀಕರಣ, ಕುಡಿಯುವ ನೀರು, ರಂಗಮಂದಿರ, ಶಾಲಾ ಕಟ್ಟಡಗಳ ದುರಸ್ತಿ, ಡೆಸ್ಕ್-ಬೆಂಚ್‌ಗಳ ಒದಗಣೆ ಮೊದಲಾದವುಗಳಿಗೆ ಈ ಕಾರ್ಯಕ್ರಮದ ಮೂಲಕ ಈವರೆಗೆ ಒಟ್ಟು 61.16 ಕೋಟಿ ರೂ. ಮೊತ್ತದ ಸಹಾಯಧನ ನೀಡಲಾಗಿದೆ.
ಶಿಕ್ಷಕರ ತೀವ್ರ ಕೊರತೆಯಿರುವ ಶಾಲೆಗಳಿಗೆ ಜ್ಞಾನದೀಪ ಶಿಕ್ಷಕರ ನಿಯೋಜನೆ ಮಾಡಲಾಗುತ್ತಿದೆ. ಈ ಶಿಕ್ಷಕರಿಗೆ ಮಾಸಿಕ ಗೌರವಧನವನ್ನು ಸಂಸ್ಥೆಯ ವತಿಯಿಂದ ಪಾವತಿಸಲಾಗುತಿದೆ. ಇದಕ್ಕಾಗಿಯೇ ಸಂಸ್ಥೆಯಿಂದ ಇದುವರೆಗೆ ಒಟ್ಟು 21.33 ಕೋಟಿ ರೂ. ಮೊತ್ತ ವಿನಿಯೋಗಿಸಲಾಗಿದೆ. ಜ್ಞಾನದೀಪ ಶಿಕ್ಷಕರ ಮೂಲಕ ವಿದ್ಯಾಭ್ಯಾಸದ ಮಧ್ಯದಲ್ಲಿ ಶಾಲೆ ಬಿಟ್ಟ 6ರಿಂದ 14 ವರ್ಷ ಪ್ರಾಯದ ಮಕ್ಕಳ ಮನೆ ಸಂದರ್ಶಿಸಿ, ಕಾರಣ ತಿಳಿಯುವುದು ಹಾಗೂ ಕುಟುಂಬದ ಸಂಪರ್ಕ ಬೆಳೆಸಿ ಅವರನ್ನು ಮತ್ತೆ ಶಾಲೆಗೆ ಸೇರ್ಪಡೆಗೊಳಿಸಲು ಶ್ರಮಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಪ್ರತೀ ವಿದ್ಯಾರ್ಥಿ ಯೂ ವಿದ್ಯಾಭ್ಯಾಸ ಪಡೆಯಲು ಪ್ರೇರಣೆ
Related Articles
Advertisement
240 ಶಾಲೆಗಳ ಏಕೋಪಾಧ್ಯಾಯ ಶಾಲೆರಾಜ್ಯಾದ್ಯಂತ ವಿವಿಧ ಶಾಲೆಗಳಿಗೆ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು 1,030 ಜ್ಞಾನದೀಪ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಈ ಪೈಕಿ 240 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿರುವುದು ಉಲ್ಲೇಖನೀಯವಾಗಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಈ ಶಿಕ್ಷಕರು ಆಯಾ ಶಾಲೆಗಳಿಗೆ ಮಹತ್ತರ ಕೊಡುಗೆ ನೀಡಲಿದ್ದಾರೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.