Advertisement

ತೈಲೋತ್ಪನ್ನ ಮಾರಾಟದಿಂದ ಸಂಗ್ರಹವಾದ ಹಣ ಅಭಿವೃದ್ಧಿ ಕಾರ್ಯಕ್ಕೆ ಬಳಕೆ : ಧರ್ಮೇಂದ್ರ ಪ್ರಧಾನ್‌

03:43 AM Jun 14, 2021 | Team Udayavani |

ಹೊಸದಿಲ್ಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳ ಕಳವಳಕಾರಿಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸ­ರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್‌ ಒಪ್ಪಿ­ಕೊಂಡಿ­ದ್ದಾರೆ. ಆದರೆ ತೈಲೋತ್ಪನ್ನಗಳ ಮಾರಾಟದಿಂದ ಸಂಗ್ರಹವಾಗಿರುವ ಮೊತ್ತವನ್ನು ಅಭಿವೃದ್ಧಿ ಕಾರ್ಯಕ್ಕೆ ಬಳಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Advertisement

1ವರ್ಷದ ಅವಧಿಯಲ್ಲಿ 35 ಸಾವಿರ ಕೋಟಿ ರೂ. ಮೊತ್ತವನ್ನು ಲಸಿಕೆಗಾಗಿ ಬಳಕೆ ಮಾಡಲಾಗಿದೆ. 1 ಲಕ್ಷ ಕೋಟಿ ರೂ. ಮೊತ್ತವನ್ನು ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆ ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ನೀಡಿಕೆಗೆ ನೀಡಲಾಗಿದೆ.

ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರ ಖಾತೆಗೆ ಮೊತ್ತ ಜಮೆ ಮಾಡಲಾಗಿದೆ ಎಂದು ಹೊಸದಿಲ್ಲಿ ಯಲ್ಲಿ ತಿಳಿಸಿದ್ದಾರೆ.

ತೈಲ ದರ ಇಳಿಕೆ ಮಾಡಬೇಕು ಎಂಬ ಮಾತಿಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್‌ ಆಡಳಿತ ಇರುವ ರಾಜಸ್ಥಾನ, ಮಹಾರಾಷ್ಟ್ರಗಳಲ್ಲಿ ಮೊದಲು ತೆರಿಗೆ ಪ್ರಮಾಣ ಇಳಿಕೆ ಮಾಡಲಿ ಎಂದರು. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಪೆಟ್ರೋಲ್‌ ದರ 100 ರೂ. ಆಗಿದೆ ಎಂಬ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next