Advertisement

CM ನಿವಾಸ ಬಳಿ ಧರಣಿ ಯತ್ನ: ರೈತ ಮುಖಂಡರ ಬಂಧನ

12:34 AM Nov 10, 2023 | Team Udayavani |

ಮೈಸೂರು: ಕಬ್ಬಿಗೆ ಹೆಚ್ಚುವರಿ ದರ ನಿಗದಿ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಗುರುವಾರ ಸಿಎಂ ಮನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

Advertisement

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಶಾರದಾದೇವಿ ನಗರದ ಸಿದ್ದರಾಮಯ್ಯ ನಿವಾಸದ ರಸ್ತೆಯನ್ನು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಿದ್ದರಾಮಯ್ಯ ನಿವಾಸದ ಬಳಿ ತೆರಳಲು ಮುಂದಾದ ನೂರಾರು ರೈತರನ್ನು ಪೊಲೀಸರು ತಡೆದರು. ಇದರಿಂದ ಕೆರಳಿದ ರೈತರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಡಳಿತ, ಪೊಲೀಸ್‌ ಆಯುಕ್ತರಿಗೆ ಒಂದು ವಾರ ಮೊದಲೇ ಧರಣಿ ನಡೆಸುವ ಮನವಿ ಸಲ್ಲಿಸಿದ್ದೆವು. ಆದರೂ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಯಾವ ಕಾರಣಕ್ಕೆ ನೀಡಿಲ್ಲ ಎಂದು ಸ್ಪಷ್ಟವಾಗಿ ಲಿಖೀತವಾಗಿ ತಿಳಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ ಪ್ರತಿಭಟನೆಗೂ ಅವಕಾಶ ಕೊಡದ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಕರೆದೊಯ್ದರು. ಬಳಿಕ ಸಿಎಆರ್‌ ಮೈದಾನದಲ್ಲಿ ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next