Advertisement

ಧಾರವಾಡ: 2 ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

07:38 PM May 30, 2020 | Sriram |

ಧಾರವಾಡ: ಜಿಲ್ಲೆಯಲ್ಲಿ ಇಂದು ಸಂಜೆ ಎರಡು ಕೋವಿಡ್ -19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.

Advertisement

ಪಿ 2807 (26 ವರ್ಷ,ಮಹಿಳೆ) ಇವರು ಪಿ  1123 ಅವರ ಸಂಪರ್ಕ ಹೊಂದಿದ್ದರು.ಪಿ 2808 ( 27, ಮಹಿಳೆ) ಇವರು ಮಹಾರಾಷ್ಟ್ರ ರಾಜ್ಯ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಈ ಇಬ್ಬರೂ ವ್ಯಕ್ತಿಗಳು ಈಗಾಗಲೇ ಕ್ವಾರಂಟೈನ್ ನಲ್ಲಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 46 ಕ್ಕೆ ಏರಿಕೆಯಾಗಿದೆ. ಈಗಾಗಲೇ 11 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ . ಉಳಿದವರು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next