Advertisement

Dharwad: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

09:58 AM May 26, 2023 | Team Udayavani |

ಧಾರವಾಡ : ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಮಲಾಪೂರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

Advertisement

ಮಹ್ಮದ್ ಕುಡಚಿ ಎಂಬ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಧಾರವಾಡದ ಕಮಲಾಪುರದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಮಹ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ.

ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿದ್ದಾನೆ.

ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ. ಆತನ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next