Advertisement

Dharwad; ಹಾಲಿನ‌ ಪ್ರೋತ್ಸಾಹ ಧನಕ್ಕೆ ಆಗ್ರಹಿಸಿ ಎಮ್ಮೆಗಳ ಸಹಿತ ಬಿಜೆಪಿ ಪ್ರತಿಭಟನೆ

06:25 PM Feb 06, 2024 | Team Udayavani |

ಧಾರವಾಡ: ಹಾಲು ಉತ್ಪಾದಕರಿಗೆ ನೀಡಬೇಕಾದ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿರುವ ರಾಜ್ಯ ಕಾಂಗ್ರೆಸ್ ಸರಕಾರ ನಡೆ ಖಂಡಿಸಿ ಬಿಜೆಪಿ ಹುಬ್ಬಳ್ಳಿ-ಧಾರವಾಡ ರೈತ ಮೋರ್ಚಾ ಜಿಲ್ಲಾ ಘಟಕದಿಂದ ನಗರದ ಡಿಸಿ ಕಚೇರಿ ಎದುರು ಮಂಗಳವಾರ ಎಮ್ಮೆಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು.

Advertisement

ಇಲ್ಲಿಯ ಡಿಸಿ ಕಚೇರಿಗೆ ಎಮ್ಮೆಗಳ ಸಹಿತ ಮೆರವಣಿಗೆ ಮೂಲಕ ಕಾಂಗ್ರೆಸ್ ಸರಕಾರದ ವಿರುದ್ದ ಘೋಷಣೆ ಕೂಗುತ್ತಾ ಆಗಮಿಸಿದ ಪ್ರತಿಭಟನಾಕಾರರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿ ಮಾಡಿದ ರೈತ ಪರ ಯೋಜನೆಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರದ್ದು ಮಾಡಿದೆ. ಈ ಸರ್ಕಾರದ ಧೋರಣೆಗಳಿಂದ ಜನರು ಮಾತ್ರವಲ್ಲ, ಜಾನುವಾರುಗಳು ಸಹ ಸಂಕಷ್ಟದಲ್ಲಿವೆ ಎಂದು ದೂರಿದರು.

ಬಿಜೆಪಿ ಆಡಳಿತದಲ್ಲಿ 26 ಲಕ್ಷ ರೈತರಿಂದ ಪ್ರತಿದಿನ 80 ರಿಂದ 85 ಲಕ್ಷ ಲೀಟರ್‌ ಹಾಲು ಸಂಗ್ರಹಿಸಲಾಗುತ್ತಿತ್ತು. ಸಿಎಂ ಯಡಿಯೂರಪ್ಪ ಅವರು ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಿದ್ದರು. ಆದರೆ ಕಾಂಗ್ರೆಸ್ ಅಧಿಕಾರ ಬಂದ ನಂತರ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ. ಆದ್ದರಿಂದ ಹಾಲಿನ ಉತ್ಪಾದನೆ ಪ್ರಮಾಣ 10 ಲಕ್ಷ ಲೀಟರ್ ಕುಸಿದಿದೆ. ರೈತರಿಗೆ ಬರಪರಿಹಾರದ ಬಾಕಿ ಹಣವನ್ನು ಶೀಘ್ರ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಜನ ಹಾಗೂ ಜಾನುವಾರು ಸಮೇತ ಬೃಹತ್ ಪ್ರತಿಭಟಣೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರೈತ ಮೋರ್ಚಾ ಅಧ್ಯಕ್ಷ ಈಶ್ವರಗೌಡ ಪಾಟೀಲ, ಕಾರ್ಯದರ್ಶಿ ಬಸವಣ್ಣೆಪ್ಪ ಬಾಳಗಿ, ಪಾಲಿಕೆ ಸದಸ್ಯೆ ಜ್ಯೋತಿ ಪಾಟೀಲ, ದತ್ತಮೂರ್ತಿ ಕುಲಕರ್ಣಿ, ಬಸವರಾಜ ಜಾಬಿನ, ಮಂಜುನಾಥ ನೀರಲಕಟ್ಟಿ, ವಿಜಯಾನಂದ ಶೆಟ್ಟಿ, ಸುರೇಶ ಬೇಂದ್ರೆ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next