Advertisement

ಕವಲಗೇರಿ ಗ್ರಾಮಕ್ಕೆ ಧಾರವಾಡ ಜಿಲ್ಲಾಧಿಕಾರಿ ಭೇಟಿ: ಚಿರತೆ ಪತ್ತೆ ಕೂಬಿಂಗ್ ಕಾರ್ಯದ ಪರಿಶೀಲನೆ

11:59 AM Sep 23, 2021 | Team Udayavani |

ಧಾರವಾಡ: ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಚಿರತೆ ಕಂಡು ಬಂದಿರುವ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮಕ್ಕೆ ತಡರಾತ್ರಿ ಭೇಟಿ ನೀಡಿ, ಕಾರ್ಯಾಚರಣೆ ಪರಿಶೀಲಿಸಿ, ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಂದ ಕೂಬಿಂಗ್ ಕಾರ್ಯದ ಕುರಿತು ಮಾಹಿತಿ ಪಡೆದರು.

Advertisement

ನಂತರ ಅವರು ಅಲ್ಲಿ ನೆರೆದಿದ್ದ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ, ನಾಳೆಯಿಂದ ಚಿರತೆ ಪತ್ತೆ ಮಾಡಿ, ಸೆರೆ ಹಿಡಿಯುವ ಕಾರ್ಯ ತೀವ್ರಗೊಳಿಸಲಾಗುವುದು. ಗ್ರಾಮಸ್ಥರು ಸಹ ಸಹಕಾರ ನೀಡಬೇಕು. ಜಿಲ್ಲಾಡಳಿತದಿಂದ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಐಎಎಸ್ ಪ್ರೊಬೇಷನರಿ ಅಧಿಕಾರಿ ಮಾಧವ ಗಿತ್ತೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ತಹಶೀಲ್ದಾರ ಡಾ.ಸಂತೋಷ ಬಿರಾದರ, ಅಮ್ಮಿನಭಾವಿ ಕಂದಾಯ ನಿರೀಕ್ಷಕ ರಮೇಶ ಬಂಡಿ, ಗ್ರಾಮಲೆಕ್ಕಾಧಿಕಾರಿ ಚೇತನ, ಕವಲಗೇರಿ ಗ್ರಾಮ ಪಂಚಾಯತ ಸದಸ್ಯ ಮುತ್ತು ಇಂಚಲ ಸೇರಿದಂತೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next