ಧಾರವಾಡ: ರಾಜ್ಯ ಸರ್ಕಾರದ ನಿರ್ದೇಶನದಂತೆ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಇಂದು (ಅ.16) ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ವನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲುಗಳನ್ನು ಸ್ವೀಕರಿಸಿದರು.
ಗ್ರಾಮ ವೀಕ್ಷಣೆ ಮಾಡಿ ಸರ್ಕಾರಿ ಶಾಲೆ, ಕೃಷಿ ಹೊಂಡ, ಆಶ್ರಯಮನೆ ನಿರ್ಮಾಣ ಮುಂತಾದ ಜಾಗ ಒತ್ತುವರಿಗಳ ಬಗ್ಗೆ ಮಾಹಿತಿಯನ್ನು ಪರಿಶೀಲಿಸಿ ಸಮಸ್ಯೆ ಬಗೆ ಹರಿಸುವುದಾಗಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭರವಸೆ ನೀಡಿದರು.
ನಂತರ ಚಂದನಮಟ್ಟಿ ಗ್ರಾಮಕ್ಕೆ ಆಗಮಿಸಿ, ಗ್ರಾಮಸ್ಥರ ಸ್ವಾಗತ ಸ್ವೀಕರಿಸಿ, ಬಸವೇಶ್ವರ ದೇವಸ್ಥಾನಕ್ಜೆ ಭೇಟಿ ನೀಡಿ, ದರ್ಶನ ಪಡೆದರು. ಅಲ್ಲಿಂದ ಕನಕೂರ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರಿಂದ ಸತ್ಕಾರ ಸ್ವೀಕರಿಸಿ, ಗ್ರಾಮದ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಇದನ್ನೂ ಓದಿ:ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ
ತಲವಾಯಿ ಗ್ರಾಮಕ್ಕೆ ಆಗಮಿಸಿ ಗ್ರಾಮಸ್ಥರಿಂದ ಸ್ವಾಗತ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ. ಇಓ ರಾಘವೇಂದ್ರ, ತಹಶಿಲ್ದಾರರ ಸಂತೋಷ ಬಿರಾದರ, ಆರ್.ಐ.ರಮೇಶ ಬಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.