Advertisement

ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಮಸ್ಟರಿಂಗ್ ಕಾರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ

11:58 AM Oct 27, 2020 | keerthan |

ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯು ನಾಳೆ ಅಕ್ಟೋಬರ್‌ 28 ರಂದು ಮತದಾನ ನಡೆಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಕಾರ್ಯ ಜರುಗಿತು.

Advertisement

ಧಾರವಾಡ ತಹಸೀಲ್ದಾರ ಕಚೇರಿ ಆವರಣದ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಅವರು ಮತಗಟ್ಟೆ ತೆರಳುವ ಅಧಿಕಾರಿ, ಸಿಬ್ಬಂದಿಗಳಿಗೆ ಹಸ್ತಾಂತರಿಸಲು ಸಿದ್ಧಪಡಿಸಿರುವ ಚುನಾವಣಾ ಸಾಮಗ್ರಿಗಳು, ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಕ್ಕಾಗಿ ನೀಡಲಾಗಿರುವ ಮಾಸ್ಕ್, ಹ್ಯಾಂಡ್ ಗ್ಲೋಸ್ ಮತ್ತಿತರ ಪರಿಕರಗಳನ್ನು ಪರಿಶೀಲಿಸಿದರು.

ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಧಾರವಾಡ ಜಿಲ್ಲೆಯಲ್ಲಿ – 21549, ಗದಗ- 15978, ಹಾವೇರಿ 23593 ಹಾಗೂ ಉತ್ತರ ಕನ್ನಡ 13148 ಜನ ಮತದಾರರು ಸೇರಿ ಒಟ್ಟು ಕ್ಷೇತ್ರದಲ್ಲಿ 74268 ಮತದಾರರು ಇದ್ದಾರೆ. ಧಾರವಾಡ ಜಿಲ್ಲೆಯ 54 ಮತಗಟ್ಟೆಗಳಲ್ಲಿ ಅಕ್ಟೋಬರ್‌ 28 ರ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next