Advertisement

Dharwad; 8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ

05:46 PM May 31, 2024 | Team Udayavani |

ಧಾರವಾಡ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಘೋಷವಾಕ್ಯ ‘ಶೈಕ್ಷಣಿಕ ಬಲವರ್ಧನೆ ವರ್ಷ’ ಇದಕ್ಕೆ ಅನುಗುಣವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರಕಾರಿ ಶಾಲೆಯ 7 ಮತ್ತು 8 ನೇ ವರ್ಗದ ಮಕ್ಕಳಿಗೆ ಇಂಗ್ಲೀಷ್ ವಿಷಯದ ಪಾಠ ಬೋಧನೆ ಮಾಡಿದರು.

Advertisement

ನಗರದ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸರಕಾರಿ ಉರ್ದು ಮತ್ತು ಕನ್ನಡ ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ 8 ನೇ ತರಗತಿ ಇಂಗ್ಲೀಷ್ ಭಾಷಾ ವಿಷಯ ಪಾಠ ಬೋಧಿಸುವ ಮೂಲಕ ಶಾಲಾ ಪ್ರಾರಂಭೋತ್ಸವಕ್ಕೆ ವಿಶಿಷ್ಟವಾಗಿ ಚಾಲನೆ ನೀಡಿದರು.

8ನೇ ವರ್ಗದ ಇಂಗ್ಲೀಷ್ ಪಠ್ಯದ ದಿ ಸ್ವಾನ್ ಆ್ಯಂಡ್ ದ ಪ್ರಿನ್ಸಸ್ ಎಂಬ ಬುದ್ಧನ ಕುರಿತ ಜಾನಪದ ನಾಟಕ ಬೋಧಿಸಿದರು. ವಿದ್ಯಾರ್ಥಿಗಳನ್ನು ವೇದಿಕೆಗೆ ಕರೆದು ಅವರನ್ನೇ ನಾಟಕದ ಪಾತ್ರದಾರಿಗಳನ್ನಾಗಿ ಮಾಡಿ, ತಾವೂ ಸೂತ್ರದಾರರಾಗಿ ಶಿಕ್ಷಕ ವೃತ್ತಿಯಲ್ಲಿ ಇರುವವರಿಗೆ ಮಾದರಿ ಆಗುವಂತೆ ಪಠ್ಯ ಬೋಧನೆ ಮಾಡಿದರು.

ಜಾನಪದ ನಾಟಕದಲ್ಲಿ ಬರುವ ಶುದ್ದೋಧನ, ಸಿದಾರ್ಥ ಮತ್ತು ದೇವದತ್ತ, ಮಂತ್ರಿಗಳ ಪಾತ್ರವನ್ನು ಒಬ್ಬೊಬ್ಬ ವಿದ್ಯಾರ್ಥಿನಿಗೆ ವಹಿಸಿ, ಓದಿಸಿ ಅದರ ಅರ್ಥವನ್ನು ಜಿಲ್ಲಾಧಿಕಾರಿಗಳು ವಿವರಿಸಿದರು. ಪಾಠದಲ್ಲಿ ಬರುವ ವ್ಯಾಕರಣ, ಸಂಜ್ಞಾವಾಚಕಗಳನ್ನು ಸ್ವತಃ ತಾವೇ ಉದ್ಧರಿಸಿ, ಅಭಿನಯಿಸಿ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಜಿಲ್ಲಾಧಿಕಾರಿಗಳ ಈ ಕಾರ್ಯವು ಇತರರಿಗೆ ಮಾದರಿ ಆಗಿದ್ದು, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮತ್ತು ಪಾಲಕರಿಗೆ ಆದರ್ಶವಾಗಿದೆ. ಓರ್ವ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಅವರು ಹೈಸ್ಕೂಲ್ ಮಕ್ಕಳಿಗೆ ಪಾಠ ಮಾಡುವ ಮೂಲಕ, ಜಿಲ್ಲೆಯ ಶೈಕ್ಷಣಿಕ ಸಾಧನೆಗೆ ಶಿಕ್ಷಕರಲ್ಲಿ, ವಿದ್ಯಾರ್ಥಿಗಳಲ್ಲಿ ಪ್ರೇರಣೆ, ಪ್ರೋತ್ಸಾಹ ತುಂಬಿದರು.

Advertisement

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಧಾರವಾಡ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ, ಡೈಟ್ ಪ್ರಾಚಾರ್ಯ ಜಯಶ್ರೀ ಕಾರೆಕರ, ಡಿವೈಪಿಸಿ ಎಸ್.ಎಂ.ಹುಡೇದಮನಿ, ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಟಿ.ಸಿ.ಡಬ್ಲ್ಯೂ ಪ್ರಾಚಾರ್ಯ ಬಿ.ಎಂ. ಬಡಿಗೇರ, ಬಿ.ಆರ್.ಸಿ ಮಂಜುನಾಥ ಅಡವೆರ, ವಿಷಯ ಪರಿವೀಕ್ಷರಾದ ಬಿ.ಬಿ. ದುಬ್ಬನಮರಡಿ, ನಫಿಜಾಬಾನು ದಾವಲಸಾಬನವರ, ಶಿವಲೀಲಾ ಕಳಸಣ್ಣವರ ಸೇರಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಂ.ಹುಡೆದಮನಿ ಸ್ವಾಗತಿಸಿದರು. ಡಿಡಿಪಿಐ ಎಸ್.ಎಸ್.ಕೆಳದಿಮಠ ಪ್ರಸ್ತಾವಿಕವಾಗಿ ಮಾತನಾಡಿದರು. ಜಯಲಕ್ಷ್ಮಿ.ಎಚ್. ಕಾರ್ಯಕ್ರಮ ನಿರೂಪಿಸಿದರು. ಬಿಇಓ ಅಶೋಕ ಸಿಂದಗಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next